logo
WhatsApp Image 2026-04-02 at 14.46.04.jpeg
hindalco everlast.jpeg

10 ಲಕ್ಷ ರೂ. ಲಂಚ ಪಡೆದ ಆರೋಪ: ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಸಿಬಿಐ ಬಲೆಗೆ

ಟ್ರೆಂಡಿಂಗ್
share whatsappshare facebookshare telegram
20 Aug 2026
post image

ನವದೆಹಲಿ: 10 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರರೊಬ್ಬರನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ.

ಬಂಧಿತ ಆರೋಪಿಯನ್ನು ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆ (ICAS) 2020ರ ಬ್ಯಾಚ್‌ನ ಅಧಿಕಾರಿ ಸಂದೀಪ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯ ನವೀಕರಣ ಕಡತವನ್ನು ಪ್ರಕ್ರಿಯೆಗೊಳಿಸಿ ಅನುಮೋದನೆ ನೀಡಲು ಉದ್ಯಮಿಯೊಬ್ಬರಿಂದ 15 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಪೈಕಿ 10 ಲಕ್ಷ ರೂ. ಲಂಚದ ಹಣವನ್ನು ತಮ್ಮ ಪತ್ನಿಯ ಮೂಲಕ ಸ್ವೀಕರಿಸಿದ ಆರೋಪ ಸಂದೀಪ್ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಕಡತವನ್ನು ತೆರವುಗೊಳಿಸುವುದಕ್ಕೆ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.