


2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ; ಅರ್ಜಿ ಪ್ರಕ್ರಿಯೆ ಆರಂಭ, ಸೆ.20ಕ್ಕೆ ಲಿಖಿತ ಪರೀಕ್ಷೆ
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಭರ್ಜರಿ ಅವಕಾಶ ನೀಡಿದೆ. ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಅಧಿಸೂಚನೆಗಳ ಬಳಿಕ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಒಟ್ಟು 2,314 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ (SRPC) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.
ಪೊಲೀಸ್ ಇಲಾಖೆಯೊಂದಿಗೆ ಜಂಟಿಯಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP), ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಹಾಗೂ ಇನ್ಫಾಂಟ್ರಿ ಬೆಟಾಲಿಯನ್ (IRB) ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳ ಆಯ್ಕೆ ನಾಲ್ಕು ಹಂತಗಳಲ್ಲಿ ನಡೆಯಲಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ₹37,500 ರಿಂದ ₹76,100 ವೇತನ ಶ್ರೇಣಿ ದೊರೆಯಲಿದೆ.
ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಸೂಕ್ತ.
ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಕೆಇಎ ಸೂಚಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.