ನವದೆಹಲಿ: 2024-25ನೇ ಹಣಕಾಸು ವರ್ಷದಲ್ಲಿ ಕೇಂದ್ರ ತೆರಿಗೆಗಳು ಮತ್ತು ಸುಂಕಗಳಲ್ಲಿ ಕರ್ನಾಟಕ ರಾಜ್ಯಕ್ಕೆ 46,933 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಈರಣ್ಣ ಕಡಾಡಿ ಕೇಳಿದ ಪ್ರಶ್ನೆಗೆ ಲಖಿತ ಉತ್ತರ ನೀಡಿದ ಸಚಿವರು, 2022-23ರಲ್ಲಿ 34,596 ಕೋಟಿ ರೂ. ಹಾಗೂ 2023-24ರಲ್ಲಿ 41,193 ಕೋಟಿ ರೂ. ಬಿಡುಗಡೆಗೊಳಿಸಲಾಗಿತ್ತು. ಸ್ಥಳೀಯ ಸಂಸ್ಥೆಗಳು, ವಿಪತ್ತು ನಿರ್ವಹಣೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಕಳೆದ ಮೂರು ವರ್ಷಗಳಲ್ಲಿ ಕ್ರಮವಾಗಿ 426 ಕೋಟಿ ರೂ., 3532 ಕೋಟಿ ರೂ. ಹಾಗೂ 826 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು ಎಂದು ವಿವರ ನೀಡಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.