logo
WhatsApp Image 2026-04-02 at 14.46.04.jpeg
hindalco everlast.jpeg

ಕೊಡಬಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಟ್ರೆಂಡಿಂಗ್
share whatsappshare facebookshare telegram
18 Jul 2026
post image

ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಅವರು ಮೂವರು ಸ್ನೇಹಿತರೊಂದಿಗೆ ಶುಕ್ರವಾರ ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿ, ಕಟ್ಟಿನಹೊಳೆ ಗ್ರಾಮದ ಸ್ನೇಹಿತನ ಮನೆಯಲ್ಲಿ ತಂಗಿದ್ದರು.

ಶನಿವಾರ ಬೆಳಗ್ಗೆ ಕೊಡಚಾದ್ರಿ ಶಿಖರಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ, ರಾತ್ರಿ ಏಕಾಏಕಿ ಶ್ರೀಕಾಂತ್ ಅವರ ಆರೋಗ್ಯದಲ್ಲಿ ಏರುಪೇರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ನೇಹಿತರು ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.