ಕಾರ್ಕಳ ಜೂ.16: ಕಳೆದ ವರ್ಷ ಅಕ್ಟೋಬರ್ 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36) ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಮೃತ ಬಾಲಕೃಷ್ಣ ಪೂಜಾರಿಯ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಎಂಬವರು ಸೇರಿ ಈ ಕೊಲೆ ಎಸಗಿದ್ದಾರೆ ಎಂಬ ಆರೋಪದಡಿ ಅಕ್ಟೋಬರ್ 25ರಂದು ಅಜೆಕಾರು ಪೊಲೀಸ್ ಠಾಣೆಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ತನಿಖೆ ಸಂದರ್ಭದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅಜೆಕಾರು ಪೊಲೀಸರು ಆರೋಪಪತ್ರ ಸಲ್ಲಿಸಲಾಗಿತ್ತು.
ಇದೀಗ ರಾಜ್ಯ ಹೈಕೋರ್ಟ್, ಪ್ರಕರಣದ ಪರಿಶೀಲನೆಯ ನಂತರ, ಪ್ರತಿಮಾಳಿಗೆ ನಿಗದಿತ ಷರತ್ತುಗಳೊಂದಿಗೆ ಜಾಮೀನು ನೀಡಿದೆ. ಕಳೆದ ಕೆಲವು ತಿಂಗಳ ಹಿಂದೆ ಪ್ರಿಯಕರ ದಿಲೀಪ್ ಹೆಗ್ಡೆ ಗು ಕೂಡ ಜಮೀನಿನ ಮೇಲೆ ಬಿಡುಗಡೆ ಗೊಂಡಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.