logo
WhatsApp Image 2026-04-02 at 14.46.04.jpeg
hindalco everlast.jpeg

ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ: ಮಂಗಳೂರಿನ ಚರ್ಚ್ ಪಾದ್ರಿ ಬಂಧನ

ಟ್ರೆಂಡಿಂಗ್
share whatsappshare facebookshare telegram
18 Oct 2026
post image

ಮಂಗಳೂರು/ಹಾಸನ: ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಪಾದ್ರಿ ಫಾದರ್ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದಾರೆ.

ಆರೋಪಿಯು ಪ್ರಾರ್ಥನೆಗೆಂದು ಚರ್ಚ್‌ಗೆ ಬರುತ್ತಿದ್ದ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಇಬ್ಬರು ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಆಧಾರದಲ್ಲಿ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆತನ ಪತ್ತೆಗಾಗಿ ಪೊಲೀಸರು ಬೆಂಗಳೂರಿನ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಕೊನೆಗೆ ಸಕಲೇಶಪುರದಲ್ಲಿರುವ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಚರ್ಚ್‌ಗೆ ಬರುತ್ತಿದ್ದ ಇನ್ನೂ ಹಲವು ಬಾಲಕರಿಗೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.