logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ದೇಶದಾದ್ಯಂತ ಅಮೂಲ್ ಹಾಲಿನ ಬೆಲೆ ರೂ.1 ಕಡಿತ

ಟ್ರೆಂಡಿಂಗ್
share whatsappshare facebookshare telegram
25 Jan 2025
post image

ನವದೆಹಲಿ: ಅಮುಲ್ ತನ್ನ 1 ಲೀಟರ್ ಪ್ಯಾಕ್‌ಗಳಾದ ಗೋಲ್ಡ್, ತಾಜಾ ಮತ್ತು ಟೀ ಸ್ಪೆಷಲ್ ಹಾಲಿನ ಬೆಲೆಯನ್ನು 1 ರೂ. ಕಡಿಮೆ ಮಾಡಿದೆ. ಈ ಕಡಿತವು 1 ಲೀಟರ್ ಪ್ಯಾಕ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಕಳೆದ ವರ್ಷ ಜೂನ್‌ನಲ್ಲಿ ಅಮುಲ್ ತನ್ನ ಎಲ್ಲಾ ಮಾದರಿಯ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂ. ಹೆಚ್ಚಿಸಿತ್ತು. ಇದೀಗ ಅಮುಲ್ ಹಾಲಿನ ಪ್ಯಾಕ್​ಗಳ ಬೆಲೆ ಲೀಟರ್​ಗೆ 1 ರೂ. ಕಡಿಮೆಯಾಗಿರುವುದನ್ನು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟದ (GCMMF) ವ್ಯವಸ್ಥಾಪಕ ನಿರ್ದೇಶಕ ಜಯೆನ್ ಮೆಹ್ತಾ ಘೋಷಿಸಿದ್ದಾರೆ. ಈ ಹೊಸ ಬೆಲೆಗಳು ತಕ್ಷಣದಿಂದ ಜಾರಿಗೆ ಬರುತ್ತವೆ. ಅಮುಲ್ ಹಾಲಿನ ಬೆಲೆ ಬದಲಾವಣೆಯ ನಂತರ, 1 ಲೀಟರ್ ಅಮುಲ್ ಗೋಲ್ಡ್ ಹಾಲಿನ ಪೌಚ್‌ನ ಬೆಲೆ 66 ರೂ.ಗಳಿಂದ 65 ರೂ.ಗಳಿಗೆ ಇಳಿಯಲಿದೆ. 1 ಲೀಟರ್ ಅಮುಲ್ ಟೀ ಸ್ಪೆಷಲ್ ಹಾಲಿನ ಪೌಚ್‌ನ ಬೆಲೆ 62 ರೂ.ಗಳಿಂದ 61 ರೂ.ಗಳಿಗೆ ಇಳಿಯಲಿದೆ. ಅದೇ ರೀತಿ, ಅಮುಲ್ ತಾಜಾ ಹಾಲಿನ ದರವನ್ನು ಲೀಟರ್‌ಗೆ 54 ರೂ.ಗಳಿಂದ 53 ರೂ.ಗಳಿಗೆ ಇಳಿಸಲಾಗುವುದು.

WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.