

ಉಡುಪಿ: ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಟ್ರೈಬಲ್ ಹೆಲ್ತ್ ನಾವಿಗೇಶನ್ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಆದಿವಾಸಿ ಸಂಯೋಜಕಿ-1 ಹುದ್ದೆ ಹಾಗೂ ತಾಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆ-3 ಹುದ್ದೆಗಳು ಸೇರಿದಂತೆ ಒಟ್ಟು ನಾಲ್ಕು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಅಥವಾ ಜಿ.ಎನ್.ಎಂ. ಅಥವಾ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಹಾಗೂ ಕಂಪ್ಯೂಟರ್ ಜ್ಞಾನ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐಟಿಡಿಪಿ ಕಚೇರಿ, ರಜತಾದ್ರಿ, ಮಣಿಪಾಲವನ್ನು ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗೆ 0820-2574814 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.