logo
WhatsApp Image 2026-04-02 at 14.46.04.jpeg
hindalco everlast.jpeg

ಬ್ಯಾಂಕ್ ಮುಷ್ಕರ ಹಿನ್ನೆಲೆ ಸೆ.27 ಭಾನುವಾರ ಬ್ಯಾಂಕ್‌ಗಳು ತೆರೆದಿರುತ್ತೆ!

ಟ್ರೆಂಡಿಂಗ್
share whatsappshare facebookshare telegram
24 Sept 2026
post image

ನವದೆಹಲಿ:** ಸೆ.28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೆ.27ರ ಭಾನುವಾರವೂ ಬ್ಯಾಂಕ್‌ಗಳು ಕಾರ್ಯನಿರ್ವಹಿಸಲಿವೆ.

ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆ.28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದಕ್ಕೂ ಮುನ್ನ ಸೆ.26 ಮತ್ತು 27ರಂದು ವಾರಾಂತ್ಯದ ರಜೆ ಇರುವುದರಿಂದ ಗ್ರಾಹಕರ ಬ್ಯಾಂಕಿಂಗ್ ಅಗತ್ಯತೆಗಳಿಗೆ ತೊಂದರೆಯಾಗದಂತೆ ಸೆ.27ರಂದು ಬ್ಯಾಂಕ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಸಾರ್ವಜನಿಕರ ಅಗತ್ಯ ಬ್ಯಾಂಕಿಂಗ್ ಸೇವೆಗಳಿಗೆ ಸತತವಾಗಿ ಹಲವು ದಿನಗಳ ಕಾಲ ಅಡಚಣೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಸೆ.27ರ ಭಾನುವಾರ ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಈ ದಿನ ಎಲ್ಲಾ ಬ್ಯಾಂಕ್ ಶಾಖೆಗಳು, ಕಚೇರಿಗಳು, ಎಟಿಎಂಗೆ ಸಂಬಂಧಿಸಿದ ಶಾಖೆಗಳು ಹಾಗೂ ಕರೆನ್ಸಿ ಚೆಸ್ಟ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಲಾಗಿದೆ.

ಬ್ಯಾಂಕ್ ಗ್ರಾಹಕರ ಹಿತ ಮತ್ತು ಅನುಕೂಲಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ, ಬ್ಯಾಂಕ್ ಆಡಳಿತ ಮಂಡಳಿಗಳೊಂದಿಗೆ ಮುಷ್ಕರವನ್ನು ಮುಂದೂಡುವಂತೆ ಬ್ಯಾಂಕ್‌ಗಳ ಸಂಘಟನೆಗಳಿಗೆ ಮನವಿ ಮಾಡಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.