ಬೆಂಗಳೂರು: 100 ವರ್ಷಗಳ ಚಲನಚಿತ್ರ ಸಂಗೀತದಲ್ಲಿ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದ ಭಾರತದ ಮೊದಲ ಹಿನ್ನೆಲೆ ಗಾಯಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಡಾ. ಪ್ರಿಯದರ್ಶಿನಿಗೆ 2023 ರ “ಬೆಳ್ಳಿ ಪರದೆ ಮಹಿಳಾ ಸಾಧಕಿ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಯೂನಿವರ್ಸಲ್ ಫಿಲಂ ಮೇಕರ್ಸ್ ಕೌನ್ಸಿಲ್ ಹಾಗೂ ನವ ಕರ್ನಾಟಕ ಫಿಲಂ ಅಕಾಡೆಮಿ ಸಹಯೋಗದಲ್ಲಿ ನಿನ್ನೆ ಬೆಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ “ಬೆಳ್ಳಿ ಪರದೆ ಮಹಿಳಾ ಸಾಧಕಿ ಪ್ರಶಸ್ತಿ’ ಯನ್ನು ಪ್ರದಾನ ಮಾಡಲಾಯಿತು.
ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ 180ಕ್ಕೂ ಹೆಚ್ಚು ಸಿನಿಮಾಗಳಿಗೆ ಹಿನ್ನೆಲೆ ಗಾಯಕಿಯಾಗಿ ಕಂಠದಾನ ಮಾಡಿರುವ ಪ್ರಿಯದರ್ಶಿನಿ 10 ಭಾಷೆಗಳಲ್ಲಿ ಖಾಸಗಿ ಆಲ್ಬಂಗಳಿಗಾಗಿ 800ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.