logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ಮಣ್ : ಪುನಾರು 25ನೇ ವರ್ಷದ ಭಜನಾ ಮಂಗಲೋತ್ಸವಕ್ಕೆ ಸಿದ್ಧತೆ

ಟ್ರೆಂಡಿಂಗ್
share whatsappshare facebookshare telegram
16 Apr 2026
post image

ಬೆಳ್ಮಣ್: ಕಾರ್ಕಳ ತಾಲೂಕು ಪುನಾರು ಬೆಳ್ಮಣ್ನಲ್ಲಿರುವ ಶ್ರೀ ಶಾಸ್ತಾವು ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿಯ ವತಿಯಿಂದ 25ನೇ ವರ್ಷದ ಭಜನಾ ಮಂಗಲೋತ್ಸವವು ಎ.16 ರಿಂದ ನಡೆಯಲಿದೆ.

ಮಾ.30 ರಂದು ಸೋಮವಾರ ರಾತ್ರಿ ನಗರ ಸಂಕೀರ್ತನೆಯೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಗಿದ್ದು, ಎ.16ರಿಂದ ಎ.20ರವರೆಗೆ ಶ್ರೀ ಶಾಸ್ತಾವು ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಂಗಲೋತ್ಸವ ನಡೆಯಲಿದೆ.

ತಾ. 16ರಂದು ಬೆಳಿಗ್ಗೆ 8 ಗಂಟೆಯಿಂದ ಗಣಹೋಮ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಮಧ್ಯಾಹ್ನ 12:30ಕ್ಕೆ ಮಹಾಪೂಜೆ ಮತ್ತು ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಜರುಗಲಿದೆ. ಸಂಜೆ 7 ಗಂಟೆಯಿಂದ ರಂಗಪೂಜೆ ನಡೆಯಲಿದೆ.

ತಾ. 17ರಂದು ಅಪರಾಹ್ನ 3 ಗಂಟೆಯಿಂದ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 5:30ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ರಾತ್ರಿ 8 ಗಂಟೆಗೆ ಭಜನಾ ಮಂಡಳಿಯ ಸದಸ್ಯರಿಂದ “ಶ್ರೀ ಕೃಷ್ಣ ಲೀಲಾಮೃತ” ಪೌರಾಣಿಕ ಕಥಾರೂಪಕ ಪ್ರದರ್ಶನ ನಡೆಯಲಿದೆ.

ತಾ. 18ರಂದು ಬೆಳಿಗ್ಗೆ 6 ಗಂಟೆಯಿಂದ ತಾ. 20ರಂದು ಬೆಳಿಗ್ಗೆ 6 ಗಂಟೆಯವರೆಗೆ ವಿವಿಧ ಆಹ್ವಾನಿತ ಭಜನಾ ಮಂಡಳಿಗಳಿಂದ ನಿರಂತರ ಭಜನಾ ಕಾರ್ಯಕ್ರಮ ನಡೆಯಲಿದೆ.

ಈ ಭಜನಾ ಮಂಗಲೋತ್ಸವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.