logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಕಾಡುಹಂದಿ ಬೇಟೆ ಆರೋಪ: ವ್ಯಕ್ತಿ ಬಂಧನ

ಟ್ರೆಂಡಿಂಗ್
share whatsappshare facebookshare telegram
22 Sept 2026
post image

ಬೆಳ್ತಂಗಡಿ: ನೆರಿಯ ಗ್ರಾಮದ ಮುಚ್ಚರಾಳಿ ಪ್ರದೇಶದಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಅದರ ಮಾಂಸವನ್ನು ಸಂಸ್ಕರಿಸಿ ಸಂಗ್ರಹಿಸಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಬಂಧಿತನನ್ನು ನೆರಿಯ ಗ್ರಾಮದ ಮುಚಳ್ಳಿ ಮನೆಯ ನಿವಾಸಿ ಕುಕ್ಕಪ್ಪ ಗೌಡ ಅವರ ಪುತ್ರ ಸುರೇಶ್ ಎಂ.ಕೆ. (38) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 20ರಂದು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕಾಡುಹಂದಿಯನ್ನು ಬೇಟೆಯಾಡಿರುವುದು ಪತ್ತೆಯಾಗಿದೆ. ಬೇಟೆಗೆ ಬಳಸಲಾಗಿದೆ ಎನ್ನಲಾದ ಬಂದೂಕು, ಚಾಕು ಹಾಗೂ ಇತರ ಉಪಕರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮಹೇಶ್ ಎಂ. ದೇವಾಡಿಗ ಅವರ ಮಾರ್ಗದರ್ಶನದಲ್ಲಿ ನೆರಿಯ ಅರಣ್ಯ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ರವಿಚಂದ್ರ ಅವರು ತನಿಖೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.