



ಮುಂಬೈ: ಬಾಲಿವುಡ್‌ನ ದಂತಕಥೆ ಹಿರಿಯ ನಟ ಧರ್ಮೇಂದ್ರ (89) ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಧರ್ಮೇಂದ್ರ ಪತ್ನಿ ಹೇಮಾ ಮಾಲಿನಿ, ಪ್ರಕಾಶ್ ಕೌರ್ ಮಕ್ಕಳಾದ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ವಿಜೇತಾ, ಅಜೀತಾ, ಇಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್ ಅವರನ್ನು ಅಗಲಿದ್ದಾರೆ.
ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ, ಮತ್ತು ಅಮೀಷಾ ಪಟೇಲ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ತಡರಾತ್ರಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಧರ್ಮೇಂದ್ರ ನಿಧನಕ್ಕೆ ಅಭಿಮಾನಿಗಳು, ಚಿತ್ರ ಕಲಾವಿದರಿಂದ ಶ್ರದ್ಧಾಂಜಲಿಗಳು ಹರಿದು ಬರುತ್ತಿವೆ.
ಪಂಜಾಬ್‌ನ ಲುಧಿಯಾನದ ಹಳ್ಳಿಯೊಂದರಲ್ಲಿ 1954 ರಲ್ಲಿ ಜನಿಸಿದ ಧರ್ಮೇಂದ್ರ 19ನೇ ವಯಸ್ಸಿನಲ್ಲಿ ಪ್ರಕಾಶ್ ಕೌರ್ ಅವರನ್ನು ವಿವಾಹವಾದರು. ನಂತರ ನಟಿ ಹೇಮಾ ಮಾಲಿನಿ ಅವರನ್ನು ಪ್ರೀತಿಸಿ ವಿವಾಹವಾದರು.
89 ನೇ ವಯಸ್ಸಿನಲ್ಲಿಯೂ ಸಹ, ಧರ್ಮೇಂದ್ರ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರು. ಆಗಾಗ ಆರೋಗ್ಯಕರ ಜೀವನ ಮತ್ತು ಸಾವಯವ ಜೀವನಶೈಲಿಯನ್ನು ಉತ್ತೇಜಿಸುವ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದರು. ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಲ್ಲಿ ಅವರು ಟ್ರ್ಯಾಕ್ಟರ್ ಓಡಿಸುವುದು, ತಮ್ಮ ಜಮೀನನ್ನು ನೋಡಿಕೊಳ್ಳುವ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.