

ಬೆಂಗಳೂರು:** ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಸಂಬಂಧ CWRC ಮತ್ತು CWMA ಆದೇಶಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡಪರ ಹಾಗೂ ರೈತ ಸಂಘಟನೆಗಳು ಮುಂದಾಗಿವೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕನ್ನಡ ಒಕ್ಕೂಟಗಳ ಸಭೆಯ ಬಳಿಕ ಹೋರಾಟಗಾರ ವಾಟಾಳ್ ನಾಗರಾಜ್ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯವ್ಯಾಪಿ ಸಂಪೂರ್ಣ ಬಂದ್ ಆಚರಿಸಲು ಕರೆ ನೀಡಲಾಗಿದೆ. ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ಸಾರಿಗೆ ಚಾಲಕರ ಸಂಘಗಳು ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರದ ಸಂಸ್ಥೆಗಳ ಆದೇಶವನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಈ ಬಂದ್‌ಗೆ ಕರೆ ನೀಡಲಾಗಿದ್ದು, ರಾಜ್ಯದಾದ್ಯಂತ ವ್ಯಾಪಕ ಬೆಂಬಲ ಕೋರಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.