ನವದೆಹಲಿ: ಪೊಲೀಸ್ ಠಾಣೆಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಮಾಡದೇ ಇರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪೊಲೀಸ್ ವಶದಲ್ಲಿರುವವರ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ಗಮನಿಸಿ ನ್ಯಾಯಾಲಯ ಈ ಪ್ರಕರಣ ದಾಖಲಿಸಿದೆ.
ಕಳೆದ ಎಂಟು–ಒಂಬತ್ತು ತಿಂಗಳಲ್ಲಿ ಪೊಲೀಸರ ವಶದಲ್ಲಿರುವಾಗಲೇ 11 ಮಂದಿ ಮೃತಪಟ್ಟಿದ್ದಾರೆಂದು ಹಿಂದಿ ಪತ್ರಿಕೆಯೊಂದು ವರದಿ ಮಾಡಿತ್ತು. ಬೆನ್ನಲ್ಲೇ ನ್ಯಾಯಮೂರ್ತಿ ವಿಕ್ರಮ್ ನಾಥ್ ಹಾಗೂ ನ್ಯಾ.ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ಸ್ವಯಂ ಪ್ರೇರಿತ ದೂರು ದಾಖಲಿಸಲು ಆದೇಶಿಸಿದೆ.
2020ರ ಡಿಸೆಂಬರ್‌ನಲ್ಲೇ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ಸಿ.ಸಿ.ಟಿ.ವಿಗಳನ್ನು ಅಳವಡಿಸಬೇಕೆಂದು ನ್ಯಾಯಾಲಯ ಆದೇಶಿಸಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.