logo
WhatsApp Image 2026-04-02 at 14.46.04.jpeg
hindalco everlast.jpeg

ಕೆಮ್ಮಣ್ಣಿನಲ್ಲಿ ಸಂಭ್ರಮದ ಮೊಸರು ಕುಡಿಕೆ: ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಟ್ರೆಂಡಿಂಗ್
share whatsappshare facebookshare telegram
8 Sept 2026
post image

ನಿಟ್ಟೆ: ರೋಟರಿ ಸಮುದಾಯ ದಳ ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.), ಕೆಮ್ಮಣ್ಣು, ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 38ನೇ ವರ್ಷದ ಮೊಸರು ಕುಡಿಕೆ ಸಾರ್ವಜನಿಕ ಕಾರ್ಯಕ್ರಮ ಕೆಮ್ಮಣ್ಣು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ವಿವಿಧ ವಯೋಮಾನದವರಿಗೆ ನಾನಾ ರೀತಿಯ ಆಕರ್ಷಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳಿಗಾಗಿ ನಡೆದ ‘ಮುದ್ದು ಕೃಷ್ಣ’ ಸ್ಪರ್ಧೆ ವಿಶೇಷ ಆಕರ್ಷಣೆಯಾಗಿದ್ದು, ಭಾಗವಹಿಸಿದ್ದ ಮಕ್ಕಳು ಹಾಗೂ ಸಾರ್ವಜನಿಕರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ನಿಟ್ಟೆಯ ಅಧ್ಯಕ್ಷೆ ರೊ. ಶೈಲಜಾ ವಿ. ಶೆಟ್ಟಿ ಹಾಗೂ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹರೀಶ್ ಆಚಾರ್ಯ ಉಪಸ್ಥಿತರಿದ್ದು, ಸಂದರ್ಭೋಚಿತವಾಗಿ ಮಾತನಾಡಿದರು.

ವೇದಿಕೆಯಲ್ಲಿ ರೋಟರಿ ಸಮುದಾಯ ದಳದ ಸಭಾಪತಿ ಗೋಪಾಲಕೃಷ್ಣ ಎಸ್., ಹಿರಿಯ ರೋಟರಿ ಬಂಧು ಕೆ. ಅನಿಲ್ ಕುಮಾರ್, ರೋಟರಿಯ ಹಿರಿಯ ಸದಸ್ಯ ಹಾಗೂ ನಿಟ್ಟೆ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರಶಾಂತ್ ಕುಮಾರ್ ಹೊಳ್ಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ರೋಟರಿ ಸಮುದಾಯ ದಳದ ಅಧ್ಯಕ್ಷ ಸುರೇಶ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಹಾಗೂ ಸ್ಥಳೀಯ ಪಂಚಾಯತ್ ಪ್ರತಿನಿಧಿ ಸಂತೋಷ್ ಶೆಟ್ಟಿ ಸ್ವಾಗತಿಸಿದರು. RCCಯ ಪೂರ್ವ ಜಿಲ್ಲಾ ಪ್ರತಿನಿಧಿ ವೆಂಕಟಕೃಷ್ಣ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳು, ಕ್ರೀಡಾ ಸಾಧಕರಿಗೆ ಗೌರವ

ಕಾರ್ಯಕ್ರಮದಲ್ಲಿ SSLC ಹಾಗೂ PUC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸ್ಥಳೀಯ ವಿದ್ಯಾರ್ಥಿಗಳಾದ ಜೀವನ್ ಕೆ.ಜೆ., ಶರಣ್ಯ ಪೂಜಾರಿ, ಸೌಮ್ಯ ಆಚಾರ್ಯ ಹಾಗೂ ವೈಭವ್ ಮೂಲ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಸ್ಥಳೀಯ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸ್ವಸ್ತಿಶ್ರೀ, ನಿಧೀಕ್ಷಾ, ಸುಜೀಕ್ಷಾ ಹೆಬ್ಬಾರ್ ಹಾಗೂ ಸುವಿನ್ ದೇವಾಡಿಗ ಅವರನ್ನು ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಸಾಧಕರನ್ನು ಸನ್ಮಾನಿಸಲಾಯಿತು. ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹರೀಶ್ ಆಚಾರ್ಯ, ಇತ್ತೀಚೆಗೆ ಪಿಎಚ್ಡಿ ಪದವಿ ಪಡೆದ ಡಾ. ಅಂಕಿತಾ ಕೆ. ರಾವ್, ಕೃಷಿ ಮತ್ತು ಹೈನುಗಾರಿಕೆಯಲ್ಲಿ ಸಾಧನೆ ಮಾಡಿದ ಗಂಗಾಧರ ಆಚಾರ್ಯ, ಶಿಕ್ಷಕ ಹಾಗೂ ‘ರಾಷ್ಟ್ರ ಪ್ರೇಮ ಸೃಜನಶೀಲ ರತ್ನ’ ಪ್ರಶಸ್ತಿ ಪುರಸ್ಕೃತ ಕಲಾವಿದ ಸುರೇಶ್ ಹಾಗೂ ಜಪಾನ್ನ ಸಕುರ ವಿಜ್ಞಾನ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಬಾಲ ಪ್ರತಿಭೆ ಕುಮಾರಿ ಮಾನ್ಯ ಶಂಕರ್ ಅವರನ್ನು ಸನ್ಮಾನಿಸಲಾಯಿತು.

ವಿವಿಧ ಗಣ್ಯರಿಂದ ಸಹಕಾರ

ಕಾರ್ಯಕ್ರಮದ ವಿವಿಧ ಸ್ಪರ್ಧೆಗಳು ಹಾಗೂ ವ್ಯವಸ್ಥೆಗಳಿಗೆ ಹಲವು ಗಣ್ಯರು ಪ್ರಾಯೋಜಕರಾಗಿ ಸಹಕರಿಸಿದರು. ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ನಿಕಟ ಪೂರ್ವ ಉಪಪ್ರಾಂಶುಪಾಲ ಡಾ. ಶ್ರೀನಿವಾಸ್ ರಾವ್ ಬಿ.ಆರ್. ಹಾಗೂ ನಿಟ್ಟೆ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರಶಾಂತ್ ಕುಮಾರ್ ಹೊಳ್ಳ ಅವರು ಮುದ್ದುಕೃಷ್ಣ ಸ್ಪರ್ಧೆಗೆ ಸಹಕರಿಸಿದರು.

ಮುಂಬೈ ಉದ್ಯಮಿ ದಿವಾಕರ ಶೆಟ್ಟಿ, ನರಂಗಬೆಟ್ಟು, ನಿಟ್ಟೆ ಅವರು ಉಪಹಾರದ ವ್ಯವಸ್ಥೆ ಮಾಡಿದರು. ಜ್ಯೋತಿಷಿ ವೇದಮೂರ್ತಿ ಪ್ರಸನ್ನ ಆಚಾರ್ಯ ಸಿಹಿತಿಂಡಿ ವ್ಯವಸ್ಥೆಗೆ ಸಹಕರಿಸಿದರೆ, ದಿವಂಗತ ರಾಘವೇಂದ್ರ ಭಟ್ ಅವರ ಸ್ಮರಣಾರ್ಥ ಪುತ್ರ ಅಕ್ಷಯ್ ಭಟ್, ಕೆಮ್ಮಣ್ಣು ಅವರು ಪಾನಕದ ವ್ಯವಸ್ಥೆ ಮಾಡಿದರು. ಕೆಮ್ಮಣ್ಣು ಕೊಪ್ಪಳ ಮನೆಯ ಕೀರ್ತಿಶೇಷ ರಾಮ್ ಭಟ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ನ ಕಾರ್ಯದರ್ಶಿ ಹಾಗೂ ರೋಟರಿ ಸಮುದಾಯ ದಳದ ಸದಸ್ಯ ಉಮೇಶ್ ಕೋಟ್ಯಾನ್, ಪ್ರಶಾಂತ್ ಕೋಟ್ಯಾನ್, ಶಂಕರ್ ಪೂಜಾರಿ, ಸ್ಥಳೀಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀಧರ ವಿ. ಆಚಾರ್ಯ ಹಾಗೂ ಕ್ಲಬ್ನ ಉಪಾಧ್ಯಕ್ಷ ಕೃಷ್ಣಾನಂದ ರಾವ್ ಅವರು ಸನ್ಮಾನ ಪತ್ರ ವಾಚಿಸಿದರು.

ವಿಠಲ್ ಆಚಾರ್ಯ, ಪ್ರಕಾಶ್ ಸಾಲ್ಯಾನ್ ಹಾಗೂ ರಾಜೇಶ್ ಮೂಲ್ಯ ಅವರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ರೋಟರಿ ಸಮುದಾಯ ದಳದ ಕಾರ್ಯದರ್ಶಿ ಪ್ರದೀಪ್ ಸುವರ್ಣ ವಂದಿಸಿದರು. ಪೂರ್ವಾಧ್ಯಕ್ಷ ಸತೀಶ್ ಶೆಟ್ಟಿ, ಅಗ್ಗ್ಯೊಟ್ಟು ಕಾರ್ಯಕ್ರಮ ನಿರೂಪಿಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.