ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ನ ವಿಭಾಗೀಯ ಪೀಠ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ನ್ಯಾಯಪೀಠ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.
ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸೌಜನ್ಯ ತಂದೆ ಚಂದಪ್ಪ ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅದೇ ರೀತಿ ಪ್ರಕರಣದಲ್ಲಿ ನಿರಪರಾಧಿಯೆಂದು ಹೊರ ಬಂದ ಸಂತೋಷ್ ರಾವ್ ತನಗೆ ಪರಿಹಾರ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.