ಉಡುಪಿ:ಕೃಷಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಮಾಹಿಯನ್ನು ಗೂಗಲ್ ಪ್ಲೇ ಸ್ಟೋರ್ ನಿಂದ "Bele Darshak - 2023-24” ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ. ಬೆಳೆ ಸಮೀಕ್ಷೆಯಲ್ಲಿ ನಮೂದಾದ ಹಾಗೂ ನಮೂದಾಗದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ . www.cropsurvey.karnataka.gov.in ತಂತ್ರಾಂಶ ಮೂಲಕ ಅಥವಾ ರೈತರು ಲಿಖಿತವಾಗಿ ತಮ್ಮ ಆಕ್ಷೇಪಣೆಗಳನ್ನು ಕೃಷಿ, ಕಂದಾಯ ಹಾಗೂ ತೋಟಗಾರಿಕಾ ಇಲಾಖೆಗಳಲ್ಲಿಯೂ ಸಹ ಸಲ್ಲಿಸಬಹುದಾಗಿದೆ.
ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.