logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ನಾಟಕದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ಉಡುಪಿ ಘೋಷಣೆ: ರಾಜ್ಯ ಸರ್ಕಾರದಿಂದ ಅಧಿಕೃತ ಅನುಮತಿ

ಟ್ರೆಂಡಿಂಗ್
share whatsappshare facebookshare telegram
12 Oct 2026
post image

ಬೆಂಗಳೂರು: ಶಿಕ್ಷಣ ಮತ್ತು ಸಾಕ್ಷರತೆಯಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಗೆ ಮತ್ತೊಂದು ಐತಿಹಾಸಿಕ ಹೆಗ್ಗಳಿಕೆ ದೊರೆತಿದೆ. ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯನ್ನು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’ ಎಂದು ಅಧಿಕೃತವಾಗಿ ಘೋಷಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದು, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ (ಸಿಇಒ) ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯೆಂದು ಘೋಷಿಸಲು ಅಧಿಕಾರ ನೀಡಿದ್ದಾರೆ.

ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಶೇ.100ರಷ್ಟು ಸಾಕ್ಷರತೆ ಸಾಧಿಸುವುದು ಪ್ರಾಯೋಗಿಕವಾಗಿ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಶೇ.95 ಅಥವಾ ಅದಕ್ಕಿಂತ ಹೆಚ್ಚಿನ ಸಾಕ್ಷರತಾ ಪ್ರಮಾಣ ಹೊಂದಿರುವ ಪ್ರದೇಶವನ್ನು ‘ಸಂಪೂರ್ಣ ಸಾಕ್ಷರ’ ಎಂದು ಪರಿಗಣಿಸಲಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ಶೇ.95ಕ್ಕಿಂತ ಹೆಚ್ಚಿನ ಸಾಕ್ಷರತಾ ಪ್ರಮಾಣ ದಾಖಲಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಾಕ್ಷರತೆ ಹೆಚ್ಚಿಸಲು ಹಲವು ಯೋಜನೆಗಳ ಜಾರಿ

ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಕೇಂದ್ರ ಸರ್ಕಾರದ ‘ಉಲ್ಲಾಸ್’ ಯೋಜನೆ, ರಾಜ್ಯ ಸರ್ಕಾರದ ‘1000 ಗ್ರಾಮ ಪಂಚಾಯತ್ ಸಾಕ್ಷರತಾ ಕಾರ್ಯಕ್ರಮ’ ಹಾಗೂ ಜಿಲ್ಲಾ ಪಂಚಾಯತ್ ಮಟ್ಟದ ಲಿಂಕ್ ಡಾಕ್ಯುಮೆಂಟ್ ಸಾಕ್ಷರತಾ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗಿತ್ತು.

ಈ ಯೋಜನೆಗಳಡಿ ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳು, ಏಳು ತಾಲೂಕು ಪಂಚಾಯತ್‌ಗಳು ಹಾಗೂ ಎಂಟು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಮಗ್ರ ಸಮೀಕ್ಷೆ ನಡೆಸಲಾಯಿತು. ಅನಕ್ಷರಸ್ಥರಿಗೆ ಓದು, ಬರವಣಿಗೆ ಮತ್ತು ಮೂಲ ಗಣಿತದ ತರಬೇತಿ ನೀಡಿ ಪರೀಕ್ಷೆ ನಡೆಸುವ ಮೂಲಕ ಅವರನ್ನು ನವಸಾಕ್ಷರರನ್ನಾಗಿ ರೂಪಿಸಲಾಯಿತು.

ತಳಮಟ್ಟದಲ್ಲಿ ಸಾಕ್ಷರತಾ ಸಾಧನೆಯನ್ನು ಪರಿಶೀಲಿಸಿ ದೃಢೀಕರಣ ಪತ್ರಗಳನ್ನು ಸಂಗ್ರಹಿಸಲಾಯಿತು. ಬಳಿಕ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಶಿಫಾರಸಿನ ಮೇರೆಗೆ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಸರ್ಕಾರದ ಅನುಮತಿಯೊಂದಿಗೆ ಉಡುಪಿ ಜಿಲ್ಲೆ ಕರ್ನಾಟಕದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗುವ ಹಂತ ತಲುಪಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.