logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಧರ್ಮಸ್ಥಳ ಸೌಜನ್ಯ ಪ್ರಕರಣ ಮರುತನಿಖೆ ಚುರುಕು: ಮೃತದೇಹ ಪತ್ತೆಯಾದ ಸ್ಥಳದಲ್ಲಿ ಎಸ್‌ಐಟಿಯಿಂದ ಮರುಸೃಷ್ಟಿ

ಟ್ರೆಂಡಿಂಗ್
share whatsappshare facebookshare telegram
31 Oct 2026
post image

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಧರ್ಮಸ್ಥಳದ ಕಾಡಿಗೆ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದ್ದಾರೆ.

ಸುಮಾರು 14 ವರ್ಷಗಳ ಹಿಂದೆ ಸೌಜನ್ಯ ಅವರ ಮೃತದೇಹ ಪತ್ತೆಯಾಗಿದ್ದ ಧರ್ಮಸ್ಥಳದ ಮಣ್ಣಸಂಕದ ಕಾಡಿನ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಎಸ್‌ಐಟಿ ತಂಡ, ಅಂದಿನ ಘಟನೆಯ ವಿವರಗಳನ್ನು ಆಧರಿಸಿ ಸ್ಥಳದಲ್ಲೇ ಮರುಸೃಷ್ಟಿ ಪ್ರಕ್ರಿಯೆ ನಡೆಸಿತು.

ಎಸ್‌ಐಟಿ ತನಿಖಾಧಿಕಾರಿ ಲೋಕೇಶ್ ಜಗಲಸಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ಮೃತದೇಹ ಪತ್ತೆಯಾಗಿದ್ದ ನಿಖರ ಸ್ಥಳವನ್ನು ಸೌಜನ್ಯ ಅವರ ಕುಟುಂಬಸ್ಥರು ಅಧಿಕಾರಿಗಳಿಗೆ ತೋರಿಸಿದರು. ಈ ವೇಳೆ ಕುಟುಂಬದ ಸದಸ್ಯರಿಂದ ಘಟನೆಯ ಕುರಿತಂತೆ ಮಾಹಿತಿ ಸಂಗ್ರಹಿಸಲಾಯಿತು.

ಸೌಜನ್ಯ ಅವರ ಮಾವ ಪುರಂದರಗೌಡ ಹಾಗೂ ಸಂಬಂಧಿ ತುಕಾರಾಂ ಅವರಿಂದಲೂ ತನಿಖಾಧಿಕಾರಿಗಳು ಮಾಹಿತಿ ಪಡೆದರು.

ಎಸ್‌ಐಟಿ ತಂಡದೊಂದಿಗೆ ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಸಿಬ್ಬಂದಿ, ಎಸ್‌ಒಸಿಒ ತಂಡ, ಗ್ರಾಮ ಆಡಳಿತಾಧಿಕಾರಿ, ಪಂಚರು, ವೈದ್ಯರು ಹಾಗೂ ಫೋಟೊ ಮತ್ತು ವಿಡಿಯೊ ಚಿತ್ರೀಕರಣ ತಂಡ ಸ್ಥಳಕ್ಕೆ ಆಗಮಿಸಿತ್ತು.

ಪ್ರಕರಣದ ಮರುತನಿಖೆಯ ಭಾಗವಾಗಿ ಸ್ಥಳ ಪರಿಶೀಲನೆ ಮತ್ತು ಮರುಸೃಷ್ಟಿ ಪ್ರಕ್ರಿಯೆ ನಡೆಸಿರುವುದು ತನಿಖೆಯ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿ

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.