logo
WhatsApp Image 2026-04-02 at 14.46.04.jpeg
hindalco everlast.jpeg

ಶಿಕ್ಷಕರಾಗುವ ಕನಸಿದೆಯೇ? ಹಾಗಾದ್ರೆ ನಿಮಗಿದು ಒಳ್ಳೆಸುದ್ದಿ: 15 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಚಾಲನೆ

ಟ್ರೆಂಡಿಂಗ್
share whatsappshare facebookshare telegram
16 Jul 2026
post image

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಕರಡು ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಒಟ್ಟು 15,000 ಶಿಕ್ಷಕರ ಹುದ್ದೆಗಳ ಪೈಕಿ ಕಲ್ಯಾಣ ಕರ್ನಾಟಕ ಭಾಗಕ್ಕೆ 6,905 ಹುದ್ದೆಗಳು ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಗೆ 8,095 ಹುದ್ದೆಗಳು ಮೀಸಲಿರಿಸಲಾಗಿದೆ.

ಇತರೆ ಜಿಲ್ಲೆಗಳಲ್ಲಿನ ಹುದ್ದೆಗಳ ವಿವರ:

  • ಜಿಪಿಟಿ (GPT) – 5,272
  • ಪ್ರೌಢಶಾಲಾ ಶಿಕ್ಷಕರು – 2,286
  • ಪಿಎಸ್‌ಟಿ (PST) – 100
  • ಕಂಪ್ಯೂಟರ್ ಸೈನ್ಸ್ – 200
  • ಪಿಇ ಗ್ರೇಡ್-1 – 131
  • ಪಿಇ ಗ್ರೇಡ್-2 – 106

ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ವಿವರ:

  • ಜಿಪಿಟಿ (GPT) – 3,228
  • ಪ್ರೌಢಶಾಲಾ ಶಿಕ್ಷಕರು – 2,214
  • ಪಿಎಸ್‌ಟಿ (PST) – 800
  • ಕಂಪ್ಯೂಟರ್ ಸೈನ್ಸ್ – 300
  • ಪಿಇ ಗ್ರೇಡ್-1 – 319
  • ಪಿಇ ಗ್ರೇಡ್-2 – 44

ಕರಡು ಅಧಿಸೂಚನೆ ಕುರಿತು ಸಾರ್ವಜನಿಕರು ಮತ್ತು ಸಂಬಂಧಿತರು 15 ದಿನಗಳೊಳಗೆ ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಬಹುದಾಗಿದೆ. ಆ ಬಳಿಕ ಅಂತಿಮ ಅಧಿಸೂಚನೆ ಪ್ರಕಟಿಸಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸುವ ಸಾಧ್ಯತೆ ಇದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.