logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಆಶ್ರಯ ಮನೆ ಫಲಾನುಭವಿಗಳಿಗೆ ಶಾಸಕರ ಕಚೇರಿಗೆ ಭೇಟಿ ನೀಡುವಂತೆ ಒತ್ತಾಯ ಖಂಡನೀಯ, ಮನೆ ನೀಡುವುದು ಸರ್ಕಾರದ ಯೋಜನೆ, ಶಾಸಕರ ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ: ಶುಭದರಾವ್

ಟ್ರೆಂಡಿಂಗ್
share whatsappshare facebookshare telegram
17 Nov 2026
post image

ಕಾರ್ಕಳ: ಪುರಸಭಾ ವ್ಯಾಪ್ತಿಯ ಪತ್ತೊಂಜಿಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ಆಶ್ರಯ ಮನೆಗಳ ಫಲಾನುಭವಿಗಳಿಗೆ ಶಾಸಕರ ಕಚೇರಿಗೆ ಭೇಟಿ ನೀಡುವಂತೆ ಒತ್ತಾಯಿಸುತ್ತಿರುವುದು ಖಂಡನೀಯ. ಇಂತಹ ವರ್ತನೆ ಮುಂದುವರಿದರೆ ಪ್ರತಿಭಟನೆ ಅನಿವಾರ್ಯವಾಗಲಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದರಾವ್ ಎಚ್ಚರಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಮುತುವರ್ಜಿಯಲ್ಲಿ ಆಶ್ರಯ ಮನೆಗಳ ನಿರ್ಮಾಣ ಕಾರ್ಯ ಒಂದು ಹಂತದಲ್ಲಿ ಪೂರ್ಣಗೊಂಡಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಮನೆಗಳನ್ನು ವಿತರಿಸಬೇಕಿತ್ತು. ಆದರೆ, ಯೋಜನೆಯ ಶ್ರೇಯಸ್ಸು ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ ಎಂಬ ಕಾರಣಕ್ಕೆ ಮನೆ ಹಸ್ತಾಂತರ ಪ್ರಕ್ರಿಯೆಯಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.

ಅರ್ಜಿದಾರರ ಮನವಿಯಂತೆ ಕಾಂಗ್ರೆಸ್ ವತಿಯಿಂದ ಈ ಹಿಂದೆ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗಿತ್ತು. ಬಳಿಕ ಸೋಮವಾರ ಸಮಿತಿಯ ಸದಸ್ಯರಾದ ಚಂಪಾ ಸುನೀಲ್, ಹುಸೇನ್ ಬಂಗ್ಲೆಗುಡ್ಡೆ, ದೀಪಕ್ ಮೊಯಿಲಿ ಮತ್ತು ಮಂಜು ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ 71 ಫಲಾನುಭವಿಗಳನ್ನು ಆಯ್ಕೆ ಮಾಡಿ ಅಂತಿಮಗೊಳಿಸಲಾಗಿದೆ. ಆದರೆ, ಮರುದಿನವೇ ಶಾಸಕರ ಕಚೇರಿಯಿಂದ ಫಲಾನುಭವಿಗಳಿಗೆ ಕರೆ ಮಾಡಿ ಕಚೇರಿಗೆ ಭೇಟಿ ನೀಡುವಂತೆ ಒತ್ತಾಯಿಸಿರುವುದರ ಹಿಂದಿನ ಉದ್ದೇಶವೇನು? ಇದು ಶಾಸಕರ ಬ್ಲ್ಯಾಕ್‌ಮೇಲ್ ತಂತ್ರವೇ ಎಂದು ಅವರು ಪ್ರಶ್ನಿಸಿದ್ದಾರೆ.

ಆಶ್ರಯ ಮನೆ ಯೋಜನೆ ಸರ್ಕಾರದ ಯೋಜನೆಯಾಗಿದ್ದು, ಯಾವುದೇ ರಾಜಕೀಯ ಪಕ್ಷದ ವೈಯಕ್ತಿಕ ಯೋಜನೆಯಲ್ಲ. ಫಲಾನುಭವಿಗಳು ಯಾರಿಗೂ ಭಯಪಡುವ ಅಗತ್ಯವಿಲ್ಲ. ಶಾಸಕರ ಕಚೇರಿಗೆ ಭೇಟಿ ನೀಡುವ ಅನಿವಾರ್ಯತೆಯೂ ಇಲ್ಲ. ಕಚೇರಿಗೆ ಭೇಟಿ ನೀಡಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳಿಗೆ ಯಾವುದೇ ತೊಂದರೆ ನೀಡಿದರೆ ಕಾಂಗ್ರೆಸ್ ತೀವ್ರ ಪ್ರತಿರೋಧ ವ್ಯಕ್ತಪಡಿಸಲಿದೆ ಎಂದು ಶುಭದರಾವ್ ಎಚ್ಚರಿಸಿದ್ದಾರೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.