


ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಕಳೆದ ರಾತ್ರಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕಳೆದ ಎರಡು ದಿನಗಳಿಂದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ರಾತ್ರಿ ಇದ್ದಕ್ಕಿದ್ದಂತೆ ಏರುಪೇರು ಆಯಿತು.
ಚೆನ್ನಮ್ಮ ಅವರ ಆರೋಗ್ಯವನ್ನು ಪರೀಕ್ಷಿಸಿರುವ ವೈದ್ಯರು, ಮುಂದಿನ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಗಂಭೀರ ತೊಂದರೆ ಇಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಮುಂಜಾಗ್ರತಾ ಕ್ರಮವಾಗಿ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. ಅವರ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ ಹಾಗೂ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.