logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಹೆಬ್ರಿಯಲ್ಲಿ ಮಾ.15ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಟ್ರೆಂಡಿಂಗ್
share whatsappshare facebookshare telegram
13 Mar 2026
post image

ಹೆಬ್ರಿ, ಮಾ.6: ಇಂದಿನ ಬಿಡುವಿಲ್ಲದ ಹಾಗೂ ಒತ್ತಡಭರಿತ ಜೀವನದಲ್ಲಿ ಜನಸಾಮಾನ್ಯರಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಹೆಬ್ರಿಯ ಅನಂತ ಪದ್ಮನಾಭ ಫ್ರೆಂಡ್ಸ್ ಕ್ಲಬ್ ವತಿಯಿಂದ ಉಡುಪಿಯ ಆದರ್ಶ ಆಸ್ಪತ್ರೆ ಹಾಗೂ ರಾಮ ಮಂದಿರದ ಜಂಟಿ ಸಹಯೋಗದಲ್ಲಿ ಮಾ.15ರಂದು ಹೆಬ್ರಿಯ ರಾಮ ಮಂದಿರದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮೆಡಿಸಿನ್ ವಿಭಾಗದ ಡಾ. ಉದಯ ಕುಮಾರ್ ಪ್ರಭು, ಚರ್ಮರೋಗ ವಿಭಾಗದ ಡಾ. ಅರುಣ್ ಶೆಟ್ಟಿ, ಮೂಳೆ ಮತ್ತು ಕೀಲು ವಿಭಾಗದ ಡಾ. ಮೋಹನ್ ದಾಸ್ ಶೆಟ್ಟಿ, ನರರೋಗ ಶಸ್ತ್ರಚಿಕಿತ್ಸಾ ವಿಭಾಗದ ಡಾ. ರಾಜೇಶ್ ನಾಯರ್, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಡಾ. ರಂಜಿತಾ ಎಸ್. ನಾಯಕ್, ಹೃದ್ರೋಗ ವಿಭಾಗದ ಡಾ. ಸುಹಾಸ್ ಬಿ.ಸಿ., ನವಜಾತ ಶಿಶು ಮತ್ತು ಮಕ್ಕಳ ವಿಭಾಗದ ಡಾ. ಗುರುಪ್ರಸಾದ್ ಶೆಟ್ಟಿ, ತೆರೆದ ಹೃದಯ ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ವಿಭಾಗದ ಡಾ. ಗುರುಪ್ರಸಾದ್ ಡಿ. ರೈ ಹಾಗೂ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಡಾ. ಅನಂತ ಎಸ್. ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಬಿಪಿ, ಶುಗರ್ ತಪಾಸಣೆ, ಹೃದಯದ ಇಸಿಜಿ, ಕೊಲೆಸ್ಟ್ರಾಲ್ ಪರೀಕ್ಷೆ, ಕಣ್ಣಿನ ತಪಾಸಣೆ ಸೇರಿದಂತೆ ಇತರೆ ಸಾಮಾನ್ಯ ಆರೋಗ್ಯ ತಪಾಸಣೆಗಳನ್ನು ನಡೆಸಲಾಗುತ್ತದೆ. ಜೊತೆಗೆ ರೋಗಿಗಳಿಗೆ 10 ದಿನಗಳ ಉಚಿತ ಔಷಧಿಯನ್ನೂ ನೀಡಲಾಗುತ್ತದೆ.

ಶಿಬಿರದಲ್ಲಿ ಭಾಗವಹಿಸಿದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುವಂತೆ ಅನಂತ ಪದ್ಮನಾಭ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷೆ ಸ್ಮಿತಾ ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9945714812 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.