logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಸರ್ಕಾರಿ ಶಾಲೆಗಳ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಉಚಿತ ನೋಟ್‌ಬುಕ್ ವಿತರಣೆ: ಮಧು ಬಂಗಾರಪ್ಪ**

ಟ್ರೆಂಡಿಂಗ್
share whatsappshare facebookshare telegram
20 Nov 2026
post image

ರಾಯಚೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತವಾಗಿ ನೋಟ್‌ಬುಕ್ ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದ ಕೃಷಿ ವಿಶ್ವವಿದ್ಯಾಲಯದ ಬಸವೇಶ್ವರ ಸಭಾಂಗಣದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಆಯೋಜಿಸಿದ್ದ ‘ಮಿಷನ್ 40+ ಸಂಕಲ್ಪ 2.0’ ವಿಭಾಗಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂದಿನ ಜೂನ್‌ನಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜತೆಗೆ ಆಂಗ್ಲ ಮಾಧ್ಯಮದಲ್ಲಿಯೂ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗುವುದು. ಆದರೆ ಆಂಗ್ಲ ಮಾಧ್ಯಮ ಕಡ್ಡಾಯವಲ್ಲ. ತಮ್ಮ ಮಕ್ಕಳಿಗೆ ಯಾವ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕು ಎಂಬುದನ್ನು ಪೋಷಕರೇ ನಿರ್ಧರಿಸಬಹುದು. ಕನ್ನಡ ಭಾಷೆಯ ಕಲಿಕೆ ಮಾತ್ರ ಕಡ್ಡಾಯವಾಗಿರಲಿದೆ. ಈಗಾಗಲೇ ರಾಜ್ಯದ 18ರಿಂದ 19 ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ 1,300ಕ್ಕೂ ಅಧಿಕ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಯೋಜನೆ ರೂಪಿಸಲಾಗಿದೆ. ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ನೆರವಿನಡಿ 500, ಕಲ್ಯಾಣ ಕರ್ನಾಟಕದ ಅಕ್ಷರ ಆವಿಷ್ಕಾರ ನಿಧಿಯಡಿ 200, ಅಲ್ಪಸಂಖ್ಯಾತರ ಇಲಾಖೆಯಿಂದ 200 ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ 300ಕ್ಕೂ ಹೆಚ್ಚು ಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.

ಇದಲ್ಲದೆ, ಜೂನ್ 1ರಿಂದ ಎಲ್ಲ ಕರ್ನಾಟಕ ಪಬ್ಲಿಕ್ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಗಳಿಂದ 5ರಿಂದ 7 ಕಿ.ಮೀ. ವ್ಯಾಪ್ತಿಯ ಸಾರಿಗೆ ಮಾರ್ಗಗಳನ್ನು ಗುರುತಿಸಿ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.