


ಬೆಂಗಳೂರು: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಮಹಿಳಾ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ಒಟ್ಟು 171 ಮಹಿಳಾ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಈ ಪೈಕಿ 30 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಗೃಹ ವಿಜ್ಞಾನ (ಹೋಮ್ ಸೈನ್ಸ್), ಸಮಾಜಕಾರ್ಯ (ಸೋಷಿಯಲ್ ವರ್ಕ್) ಅಥವಾ ಸಮಾಜಶಾಸ್ತ್ರ (ಸೋಷಿಯಾಲಜಿ) ವಿಷಯಗಳಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 43 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 45 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳು 500 ರೂ. ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ: ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನವೆಂಬರ್ 3ರಿಂದ ಆರಂಭವಾಗಿದ್ದು, ನವೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ಅರ್ಹತಾ ಮಾನದಂಡಗಳು ಹಾಗೂ ಅಧಿಕೃತ ಅಧಿಸೂಚನೆಗಾಗಿ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ cetonline.karnataka.gov.in ಗೆ ಭೇಟಿ ನೀಡಬಹುದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.