


ಕಾರ್ಕಳ: ಬಜಗೋಳಿ ಬಸ್ ನಿಲ್ದಾಣದ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ‘ಬಾಟಲ್ ಬೂತ್’ (Bottle Booth) ಅನ್ನು ಮುಡಾರು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು.
ಮುಡಾರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಮಾರ್ಗದರ್ಶಕ ರೊ. ಡಾ. ಭರತೇಶ ಆದಿರಾಜ್ ಹಾಗೂ ಅಧ್ಯಕ್ಷ ರೊ. ಮಂಜುನಾಥ್ ಹೆಗ್ಡೆ ಅವರ ಉಪಸ್ಥಿತಿಯಲ್ಲಿ, ಉಡುಪಿ ಜಿಲ್ಲಾ SLRM ಮೇಲ್ವಿಚಾರಕರು ಹಾಗೂ SLRM ಕಾರ್ಯಕರ್ತರ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ರೊ. ಮಾಧವಿ ಕೆ. ಅವರ ನೇತೃತ್ವದಲ್ಲಿ ಸ್ವಚ್ಛತಾ ಘಟಕವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ಬಜಗೋಳಿ ಬಸ್ ನಿಲ್ದಾಣದ ಪರಿಸರದಲ್ಲಿ ಬಾಟಲ್ ಬೂತ್ ಅಳವಡಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ರಮೇಶ್ ಎಸ್., ನಿಕಟಪೂರ್ವ ಅಧ್ಯಕ್ಷ ಸುರೇಶ್ ಶೆಟ್ಟಿ, ಶ್ರುತಿ ಡಿ. ಅಧಿಕಾರಿ, ಸದಸ್ಯ ಪ್ರಶಾಂತ್ ಪೂಜಾರಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, SLRM ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ನಿಕಟಪೂರ್ವ ಅಧ್ಯಕ್ಷ ರೊ. ಸುರೇಂದ್ರ ನಾಯಕ್, ಪೂರ್ವ ಅಧ್ಯಕ್ಷ ರೊ. ಉಪೇಂದ್ರ ವಾಗ್ಲೆ, ಕ್ಲಬ್‌ನ ಐಟಿ ಚೇರ್ಮನ್ ರೊ. ಶ್ರೀವರ್ಮ ಅಜ್ರಿ ಹಾಗೂ ಕಾರ್ಯದರ್ಶಿ ರೊ. ಗಣೇಶ ಬರ್ಲಾಯ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಬಾಟಲ್ ಬೂತ್ ಮೂಲಕ ಸಾರ್ವಜನಿಕರು ಬಳಸಿ ಬಿಸಾಡುವ ಪ್ಲಾಸ್ಟಿಕ್ ಬಾಟಲಿಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಸಾಧ್ಯವಾಗಲಿದ್ದು, ಬಸ್ ನಿಲ್ದಾಣದ ಪರಿಸರವನ್ನು ಸ್ವಚ್ಛವಾಗಿಡಲು ಇದು ಸಹಕಾರಿಯಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.