logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ, 3 ರಿಂದ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ!

ಟ್ರೆಂಡಿಂಗ್
share whatsappshare facebookshare telegram
2 Nov 2026
post image

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸದ್ಯದ ಹವಾಮಾನ ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕೆಲವೆಡೆ ಮಧ್ಯಾಹ್ನದ ನಂತರ ಮತ್ತು ಸಂಜೆ ವೇಳೆ ಗುಡುಗು ಸಹಿತ ಭರ್ಜರಿ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೊಡಗು, ಹಾಸನ ಜಿಲ್ಲೆಯ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಸುರಿಯುವ ಮುನ್ಸೂಚನೆ ಇದೆ. ಅದರಲ್ಲೂ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲೂ ಮಳೆ ಮುನ್ಸೂಚನೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಸಾಧಾರಣ ಮಳೆಯೂ ಸುರಿಯಬಹುದು. ಮುಂದಿನ 3ರಿಂದ 4 ದಿನಗಳ ಕಾಲ ಈ ಭಾಗಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.