logo
WhatsApp Image 2026-04-02 at 14.46.04.jpeg
hindalco everlast.jpeg

ಇಂದಿನಿಂದ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ: ಅ. 24ರವರೆಗೆ ಯೆಲ್ಲೋ ಅಲರ್ಟ್

ಟ್ರೆಂಡಿಂಗ್
share whatsappshare facebookshare telegram
19 Oct 2026
post image

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹವಾಮಾನ ಇಲಾಖೆಯ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.