


ಹೆಬ್ರಿ: ಎಲ್ಲಾ ಮಕ್ಕಳು ಕೂಡ ನಮ್ಮ ಶಿಕ್ಷಕರಿಗೆ ತಮ್ಮ ಸ್ವಂತ ಮಕ್ಕಳ ಹಾಗೆ ಎಲ್ಲರನ್ನೂ ಎಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡುತ್ತಾರೆ. ಎಲ್ಲಾ ಮಕ್ಕಳಿಗೂ ಸಮಾನವಾದ ಪ್ರಾಶಸ್ತ್ಯ ನೀಡಿ. ಎಲ್ಲಾ ಮಕ್ಕಳಿಗೂ ಅವಕಾಶ ದೊರೆಯುವಂತಾಗಲಿ ಎಂದು ಎಸ್. ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಚ್. ನಾಗರಾಜ್ ಶೆಟ್ಟಿ ಅವರು ಹೇಳಿದರು.
ಇವರು ಎಸ್.ಆರ್ ಪಬ್ಲಿಕ್ ಸ್ಕೂಲ್ (ಕೇಂದ್ರೀಯ ಪಠ್ಯಕ್ರಮ) ಪ್ರಿಕೆಜಿಯಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ "ಎಸ್.ಆರ್ ಬಾಲ ಉತ್ಸವ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ' ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅವರು ಮಾತನಾಡಿ, ಪುಟಾಣಿ ಮಕ್ಕಳ ಪ್ರತಿಭೆಗಳು ಪ್ರತಿಯೊಬ್ಬರ ಮನಸ್ಸನ್ನು ಆಕರ್ಷಿಸುತ್ತದೆ. ಇಂದು ಎಲ್ಲರೂ ಸಂಭ್ರಮಿಸಿ, ನಿಮಗಾಗಿ ಆಯೋಜಿಸಿದ ಕಾರ್ಯಕ್ರಮ ಎಲ್ಲರೂ ಭಾಗವಹಿಸಿ ಎಲ್ಲರೂ ಅವಕಾಶವನ್ನು ಬಳಸಿಕೊಳ್ಳಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ, ಉಪಪ್ರಾಂಶುಪಾಲರಾದ ದೀಪಕ್ ಎನ್, ಕೋಓರ್ಡಿನೇಟರ್ ಸುಜಾತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮತ್ತಿತರ ಶಿಕ್ಷಕರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ಮ್ಯಾಜಿಕ್, ಡಾನ್ಸ್, ಸ್ಕಿಟ್, ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪ್ರತಿಭಾ ಪ್ರದರ್ಶನವು ನಡೆಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ 4ನೇ ತರಗತಿಯ ಬ್ರಾಹ್ಮಿ ಮತ್ತು ಸಾನ್ವಿ ಜಿ ನಿರೂಪಿಸಿ, ಎಲ್ಕೆಜಿ ತರಗತಿಯ ತ್ರಿಶಾನ್ ಎಸ್ ಶೆಟ್ಟಿ ಸ್ವಾಗತಿಸಿ, ಯುಕೆಜಿ ತರಗತಿಯ ದಕ್ಷ್ ಪಿ ಆಚಾರ್ಯ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.