


ಹೆಬ್ರಿ: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ 100 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿ ಶೇಕಡಾ ನೂರು ಫಲಿತಾಂಶ ಪಡೆದ ಸಂಸ್ಥೆಗೆ ಕಾರ್ಕಳ ತಾಲೂಕು ಮುಖ್ಯೋಪಾಧ್ಯಾಯ ಸಂಘ ಮತ್ತು ಕಾರ್ಕಳ ತಾಲೂಕು ಸಹ ಶಿಕ್ಷಕರ ಸಂಘದ ವತಿಯಿಂದ " ಯಶೋಯಾನ " ಎಂಬ ಕಾರ್ಯಕ್ರಮದಲ್ಲಿ ಕಾರ್ಕಳ ಕ್ರಿಯೇಟಿವ್ ಪಿ ಯು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಮುಖ್ಯಶಿಕ್ಷಕಿ ಅಪರ್ಣಾ ಆಚಾರ್, ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ, ಗಣಿತ ಶಿಕ್ಷಕಿ ಪಂಚಮಿ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.