ಬೆಂಗಳೂರು: ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವತ್ತ ಸರ್ಕಾರ ಆದ್ಯತೆ ನೀಡಿದೆ. ಸಾಮಾನ್ಯ, ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಸರ್ವ ಪ್ರಯತ್ನ ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ಅವರು ಏನಿದು ಗೃಹ ಆರೋಗ್ಯ ಯೋಜನೆ: ಗೃಹ ಆರೋಗ್ಯ' ಎನ್ನುವುದು ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಭಾಗ್ಯವನ್ನು ಕೊಂಡೊಯ್ಯುವ ಪ್ರಮುಖವಾದ ಯೋಜನೆ ಆಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಸಾಂಕ್ರಾಮಿಕ ರೋಗಗಳನ್ನು ಗುರುತಿಸಿ ಮತ್ತು ನಿರಂತರ ಚಿಕಿತ್ಸೆಯಿಂದ ಮರಣದ ಪ್ರಮಾಣವನ್ನು ಕಡಿಮೆ ಮಾಡುವ ಗುರಿ ಹೊಂದಿರುವ ಯೋಜನೆ ಇದಾಗಿದೆ.
ಈ ಯೋಜನೆಯಡಿ ಮನೆಗಳಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ 30 ವರ್ಷ ದಾಟಿದವರನ್ನು ತಪಾಸಣೆಗೆ ಒಳಪಡಿಸಿ ಅವರಿಗೆ ಏನಾದರೂ ಸಮಸ್ಯೆ ಇದ್ದರೆ ಉಚಿತವಾಗಿ ಚಿಕಿತ್ಸೆ, ಔಷಧ ನೀಡುತ್ತಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.