logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ: ಇಂದಿನಿಂದಲೇ 543 ಔಷಧಿಗಳಿಗೆ ಹೊಸ ದರ ಜಾರಿ!

ಟ್ರೆಂಡಿಂಗ್
share whatsappshare facebookshare telegram
9 Nov 2026
post image

ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ದೇಶಾದ್ಯಂತ ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆಯಾಗಲಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರದ (NPPA) ಆದೇಶದಂತೆ 137 ಜೀವ ರಕ್ಷಕ ಔಷಧಿಗಳು ಸೇರಿದಂತೆ ಒಟ್ಟು 543 ಆಂಟಿ-ಕ್ಯಾನ್ಸರ್ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆಯನ್ನು ಕಡಿತಗೊಳಿಸಲಾಗಿದೆ.

ಕೆಲವು ಔಷಧಿಗಳ ಬೆಲೆಯಲ್ಲಿ ಶೇ.50ರಿಂದ ಗರಿಷ್ಠ ಶೇ.96.45ರವರೆಗೆ ಇಳಿಕೆ ಮಾಡಲಾಗಿದೆ. ಇದುವರೆಗೆ ಕೆಲವು ಕ್ಯಾನ್ಸರ್ ಔಷಧಿಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯೂ ಔಷಧಿಗಳ ಬೆಲೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಅಲ್ಲದೆ, ಕ್ಯಾನ್ಸರ್ ಔಷಧಿಗಳ ದುಬಾರಿ ಬೆಲೆ ಕುರಿತು ಸುಪ್ರೀಂ ಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿತ್ತು.

ಇದಾದ ಬಳಿಕ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ ಔಷಧಿಗಳ ಬೆಲೆ ಪರಿಷ್ಕರಿಸಿ, ನೂತನ ದರಗಳನ್ನು ಇಂದಿನಿಂದಲೇ ಜಾರಿಗೆ ಬರುವಂತೆ ಆದೇಶಿಸಿದೆ.

ಔಷಧಿಗಳ ಬೆಲೆ ಇಳಿಕೆಯಿಂದ ಕ್ಯಾನ್ಸರ್ ರೋಗಿಗಳಿಗೆ ವಾರ್ಷಿಕವಾಗಿ 2,000 ಕೋಟಿ ರೂಪಾಯಿಗೂ ಅಧಿಕ ಮೊತ್ತ ಉಳಿತಾಯವಾಗುವ ನಿರೀಕ್ಷೆಯಿದೆ. ಇಮ್ಯುನೊಥೆರಪಿ ಔಷಧಿಗಳು, ಡೆನೋಸುಮ್ಯಾಬ್, ಪೆಗ್‌ಫಿಲ್‌ಗ್ರಾಸ್ಟಿಮ್ ಹಾಗೂ ಬೆವಾಸಿಝುಮಾಬ್ ಸೇರಿದಂತೆ ಹಲವು ಪ್ರಮುಖ ಔಷಧಿಗಳ ಬೆಲೆಯೂ ಕಡಿಮೆಯಾಗಿದೆ.

ಹೆಚ್ಚುವರಿ ದರಕ್ಕೆ ಮಾರಾಟ ಮಾಡಿದರೆ ಕ್ರಮ

ಹೊಸ ದರ ಜಾರಿಯಾದ ಬಳಿಕ ಆಸ್ಪತ್ರೆಗಳು, ಔಷಧಿ ಚಿಲ್ಲರೆ ಮಾರಾಟಗಾರರು ಹಾಗೂ ಸಗಟು ವ್ಯಾಪಾರಿಗಳು ನಿಗದಿಪಡಿಸಿರುವ ಗರಿಷ್ಠ ಬೆಲೆಗಿಂತ ಹೆಚ್ಚಿನ ದರಕ್ಕೆ ಔಷಧಿಗಳನ್ನು ಮಾರಾಟ ಮಾಡುವಂತಿಲ್ಲ. ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಆ್ಯಪ್ ಮೂಲಕ ಔಷಧಿಗಳ ಬೆಲೆ ಪರಿಶೀಲನೆ

ಗ್ರಾಹಕರು ಔಷಧಿಗಳ ನೈಜ ಬೆಲೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. 'ಫಾರ್ಮಾ ಸಹಿ ದಾಮ್' (Pharma Sahi Daam) ಆ್ಯಪ್ ಹಾಗೂ NPPA ಅಧಿಕೃತ ವೆಬ್‌ಸೈಟ್ ಮೂಲಕ ಪರಿಷ್ಕೃತ ಔಷಧಿಗಳ ಬೆಲೆಪಟ್ಟಿಯನ್ನು ಪರಿಶೀಲಿಸಬಹುದು.

ಒಟ್ಟಿನಲ್ಲಿ, ಕ್ಯಾನ್ಸರ್ ಚಿಕಿತ್ಸೆಗೆ ದುಬಾರಿ ಔಷಧಿಗಳನ್ನು ಖರೀದಿಸಬೇಕಾದ ಅನಿವಾರ್ಯತೆಯಲ್ಲಿರುವ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಈ ಬೆಲೆ ಇಳಿಕೆ ಆರ್ಥಿಕವಾಗಿ ದೊಡ್ಡ ಮಟ್ಟದ ನೆರವು ನೀಡುವ ನಿರೀಕ್ಷೆಯಿದೆ.

WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-11-08 at 9.04.18 AM (2).jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.