logo
WhatsApp Image 2026-04-02 at 14.46.04.jpeg
hindalco everlast.jpeg

ಹೋಟೆಲ್‌ಗಳಲ್ಲಿ ಆಹಾರ ಕಳಪೆಯಾಗಿದ್ರೆ ಕ್ಯೂಆರ್ ಕೋಡ್ ಮೂಲಕ ದೂರು ನೀಡಬಹುದು!

ಟ್ರೆಂಡಿಂಗ್
share whatsappshare facebookshare telegram
18 Aug 2026
post image

ಬೆಂಗಳೂರು:** ರಾಜ್ಯದ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವ ಬೆನ್ನಲ್ಲೇ, ಹೋಟೆಲ್‌ಗಳಲ್ಲಿ ಸಿಸಿಟಿವಿ ಹಾಗೂ ಗ್ರಾಹಕರು ದೂರು ನೀಡಲು ಕ್ಯೂಆರ್ ಕೋಡ್ ಅಳವಡಿಸುವುದಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಆದರೆ, ಈ ಆದೇಶವನ್ನು ಪುನರ್ ಪರಿಶೀಲಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಆಗ್ರಹಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ತಪಾಸಣೆ ಮುಂದುವರಿಸಿದೆ. ನಿನ್ನೆಯವರೆಗೆ 60ಕ್ಕೂ ಹೆಚ್ಚು 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್‌ಗಳು, 8 ಗೋಡೌನ್‌ಗಳು ಹಾಗೂ 4 ಎಂಟರ್‌ಪ್ರೈಸ್ ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ತಪಾಸಣೆ ವೇಳೆ ಆಹಾರ ಸುರಕ್ಷತಾ ನಿಯಮಗಳ ಪಾಲನೆ, ಆಹಾರ ಸಂಗ್ರಹಣೆ, ಗುಣಮಟ್ಟ ಹಾಗೂ ಲೇಬಲಿಂಗ್ ಪರಿಶೀಲಿಸಲಾಗಿದೆ. ಅವಧಿ ಮೀರಿದ, ತಪ್ಪು ಲೇಬಲ್ ಹೊಂದಿರುವ ಹಾಗೂ ಅಸಮರ್ಪಕವಾಗಿ ಸಂಗ್ರಹಿಸಿದ್ದ ಆಹಾರ ಪದಾರ್ಥ ಸೇರಿದಂತೆ ನೂರಾರು ಕೆಜಿ ಆಹಾರವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇನ್ನು ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ಘೋಷಿಸಿದ್ದಾರೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರದ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಆದರೆ, ಹೋಟೆಲ್‌ಗಳಲ್ಲಿ ಕ್ಯೂಆರ್ ಕೋಡ್ ಅಳವಡಿಸುವ ಕ್ರಮಕ್ಕೆ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಸಂಘದ ಸದಸ್ಯರೊಂದಿಗೆ ಚರ್ಚಿಸಿ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಸರ್ಕಾರದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.

ಅಲ್ಲದೆ, ಹೋಟೆಲ್‌ಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಹೋಟೆಲ್‌ಗಳ ಹೆಸರು ಬಹಿರಂಗಪಡಿಸುವ ಬಗ್ಗೆಯೂ ಅಸೋಸಿಯೇಷನ್ ಅಸಮಾಧಾನ ವ್ಯಕ್ತಪಡಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.