logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಫೆ.8 ರಂದು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
7 Feb 2026
post image

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವಿದ್ಯಮಾನದಲ್ಲಿ ಶಿಕ್ಷಣ ಕೇವಲ ಪದವಿಗೆ ಮಾತ್ರ ಸೀಮಿತವಾಗಿಲ್ಲ. ಜಗತ್ತು ಪ್ರತಿಭಾನ್ವೇಷಣೆಯಲ್ಲಿದೆ. ಈ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಮಕ್ಕಳು ವೃತ್ತಿಪರ ಕ್ಷೇತ್ರದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವಪೂರ್ಣವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲೇ ಇದೇ ಮೊದಲ ಬಾರಿಗೆ ಎಂಬಂತೆ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನದ ಕಾರ್ಯಕ್ರಮವನ್ನು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ Walk-in to VIDVATH, A step into success ಎಂಬ ವಿಶೇಷ ಕಾರ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ.

ವಿದ್ಯಾರ್ಥಿಗಳ ಭವಿಷ್ಯಕ್ಕೊಂದು ಬುನಾದಿ: ಪದವಿ ಶಿಕ್ಷಣಕ್ಕೆ ಪ್ರವೇಶ ಪಡೆಯಬೇಕಾದರೆ ಪ್ರವೇಶ ಪರೀಕ್ಷೆ ಕಡ್ಡಾಯವಾಗಿದೆ. ಮಕ್ಕಳು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗೆ ಅಣಿಯಾಗಬೇಕಾದರೆ ಅದರ ಪ್ರಾಮುಖ್ಯತೆಯನ್ನು ಅರಿತುಕೊಂಡು ನುರಿತ ಶಿಕ್ಷಕರ ಮಾರ್ಗದರ್ಶನದಲ್ಲಿ ಮುನ್ನಡೆದಲ್ಲಿ ಮಾತ್ರ ಪ್ರವೇಶ ಪರೀಕ್ಷೆ ಎಂಬ ಸವಾಲನ್ನು ಎದುರಿಸಲು ಸಜ್ಜಾಗುತ್ತಾರೆ. ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ ಅವರ ಮುಂದಿರುವ ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಹಾಗೂ ಅವರಲ್ಲಿ ವಿಶೇಷ ಆಸಕ್ತಿ ಹುಟ್ಟಿಸುವ ಸಲುವಾಗಿ ವೃತ್ತಿಪರ ಆಪ್ತ ಸಮಾಲೋಚನೆ ಮಕ್ಕಳಿಗೆ ಅತ್ಯವಶ್ಯ. ಮಕ್ಕಳು ಪ್ರೌಢ ಶಿಕ್ಷಣಕ್ಕೆ ಪ್ರವೇಶಿಸುವಾಗಲೇ ನಾವು ಭವಿಷ್ಯದ ಕನಸು ಕಟ್ಟಿಕೊಂಡು ಮುಂದಿನ ಶಿಕ್ಷಣಕ್ಕೆ ಅಣಿಯಾದಲ್ಲಿ ಮಾತ್ರ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ತಮ್ಮ ನೆಚ್ಚಿನ ಕಾರ್ಯಕ್ಷೇತ್ರಕ್ಕೆ ಪ್ರವೇಶಿಸಲು ಸಹಕಾರಿಯಾಗುತ್ತದೆ.

54 ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ: ಸ್ಪರ್ಧಾತ್ಮಕ ಪರೀಕ್ಷೆಯಡಿ ಸರಿಸುಮಾರು 54 ಕ್ಕೂ ಅಧಿಕ ಪರೀಕ್ಷೆಗಳಿವೆ. ಆದರೆ ಬಹುತೇಕ ಮಂದಿಗೆ ಈ ಕುರಿತು ಸುಧೀರ್ಘ ಮಾಹಿತಿ ಕೊರತೆಯಿರುವುದು ಸಮೀಕ್ಷೆಯಡಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗೋಪಾಯದ ಹುಡುಕಾಟದಲ್ಲಿ ಪೋಷಕರು ಅಲೆದಾಡುವುದು, ಸರಿಯಾದ ಮಾರ್ಗದರ್ಶನದ ಕೊರತೆಯಿಂದ ಮಕ್ಕಳು ತಮ್ಮದಲ್ಲದ ತಪ್ಪಿಗೆ ಅವರ ಗುರಿ ತಲುಪಲಾಗದಿದ್ದಲ್ಲಿ ಪರಿತಪಿಸುವುದು; ಇವೆಲ್ಲವೂ ನಮ್ಮ ಸುಮಾರು 30 ವರ್ಷಗಳ ಶೈಕ್ಷಣಿಕ ವಲಯದ ಅನುಭವದಲ್ಲಿ ಕಂಡುಕೊಂಡಿರುವ ಗಂಭೀರ ವಿಚಾರಗಳಾಗಿವೆ. ಈ ನಿಟ್ಟಿನಲ್ಲಿ ಮಕ್ಕಳ ಶ್ರೇಯೋಭಿವೃದ್ಧಿಯ ಹಿತದೃಷ್ಟಿಯಿಂದ "ವಿದ್ವತ್ ಎಜುಕೇಶನ್ ಫೌಂಡೇಶನ್" "Walk-in to Vidvath" A step into success ಎಂಬ ಕಾರ್ಯಕ್ರಮವನ್ನು ಪ್ರಥಮವಾಗಿ ಪರಿಚಯಿಸುತ್ತಿದೆ.

ಕಾರ್ಯಕ್ರಮವು ವಿಭಿನ್ನ ನೋಟದೊಂದಿಗೆ ಆರಂಭಗೊಂಡು ವರ್ಷಪೂರ್ತಿ ನಿರಂತರವಾಗಿ ನಡೆಯುವಂತದ್ದಾಗಿದೆ. ಈ ವೇಳೆ ವಿದ್ಯಾರ್ಥಿಗಳ ಆಸಕ್ತಿ, ಸಾಮರ್ಥ್ಯ ಹಾಗೂ ದೀರ್ಘಕಾಲೀನ ಗುರಿಗಳನ್ನು ಆಧರಿಸಿ ಸರಿಯಾದ ವೃತ್ತಿ ದಿಕ್ಕು ತಿಳಿದುಕೊಳ್ಳಲು ನಮ್ಮ ಅನುಭವಿ ಉಪನ್ಯಾಸಕರು ಮತ್ತು ಮಾರ್ಗದರ್ಶಕರಿಂದ ವೈಯಕ್ತಿಕ ಸಲಹೆ ನೀಡಲಾಗುತ್ತದೆ.

ಫೆ.8 ರಂದು ಸಂಜೆ 4 ಗಂಟೆಗೆ ಉದ್ಘಾಟನೆ: ಕಾರ್ಯಕ್ರಮವು ಇದೇ ಬರುವ ದಿನಾಂಕ: 08-02-2026 ರಂದು ಭಾನುವಾರ ಸಂಜೆ 4.00 ಗಂಟೆಗೆ ಸರಿಯಾಗಿ ಗುರುವಾಯನಕೆರೆ ಶಕ್ತಿನಗರ ಸಮೀಪದ ವಿದ್ವತ್ ಪಿಯು ಕಾಲೇಜಿನಲ್ಲಿ WALK IN TO VIDVATH" - A STEP INTO SUCCESS ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮೆಲ್ಲರನ್ನು ಆತ್ಮೀಯವಾಗಿ ಆಹ್ವಾನಿಸುತ್ತಿದ್ದೇವೆ.

ಕಾರ್ಯಕ್ರಮದ ಉದ್ಘಾಟಕರು: ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಶ್ರೀಯುತ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಶ್ರೀಯುತ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬರೋಡದ ಖ್ಯಾತ ಉದ್ಯಮಿಗಳಾದ ಶ್ರೀಯುತ ಶಶಿಧರ್ ಶೆಟ್ಟಿ ನವಶಕ್ತಿ, ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಮೆಸ್ಕಂ ಚೇರ್ ಮನ್ ಶ್ರೀಯುತ ಕೆ.ಹರೀಶ್ ಕುಮಾರ್, ಬೆಳ್ತಂಗಡಿ ಸಿರೋ ಮಲಬಾರ್ ಕ್ಯಾಥೊಲಿಕ್ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾ.ಜೋಸೆಫ್ ವಲಿಯಪರಂಬಿಲ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ, ಬೆಳ್ತಂಗಡಿ ಪೊಲೀಸ್ ವಿಭಾಗದ ಡಿವೈ.ಎಸ್.ಪಿ. ರೋಹಿಣಿ ಸಿ.ಕೆ., ಭಾಗವಹಿಸಲಿರುವರು.

ವಿಶೇಷ ಆಹ್ವಾನಿತರು: ಇದೇ ವೇಳೆ ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ, ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಅವರನ್ನು ಕಾಲೇಜು ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಗುವುದು.

ನೂತನ ಲ್ಯಾಬ್ ಉದ್ಘಾಟನೆ: ವಿದ್ವತ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಠ್ಯಕ್ಕೆ ಪೂರಕ, ಪ್ರಯೋಗಶೀಲತೆಗೆ ಸಹಕಾರಿಯಾಗಿ ಅತ್ಯಾಧುನಿಕ ಹಾಗೂ ನಾವೀನ್ಯ ಮಾದರಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರಕ್ಕೆ ಸಂಬಂಧಿಸಿದ ಸುಸಜ್ಜಿತ ಲ್ಯಾಬ್ ಸಜ್ಜುಗೊಳಿಸಲಾಗಿದ್ದು, ಅದರ ಉದ್ಘಾಟನೆಯು ಅಂದು ಮುಖ್ಯ ಅತಿಥಿಗಳಿಂದ ನೆರವೇರಲಿದೆ.

ಪ್ರತಿಭಾ ಪುರಸ್ಕಾರವಾಗಿ ಲ್ಯಾಪ್ ಟಾಪ್, ಟ್ಯಾಬ್: ಕಾರ್ಯಕ್ರಮ ಉದ್ಘಾಟನೆ ಬಳಿಕದ ದಿನದಲ್ಲಿ "ವಿದ್ವತ್ ಪ್ರತಿಭಾನ್ವೇಷಣೆ" ಎಂಬ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದ ಎಲ್ಲೆಡೆಯಿಂದ ಆಗಮಿಸುವ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ "ಪ್ರತಿಭಾ ಪರೀಕ್ಷೆ" ಬರೆಯುವ ಅವಕಾಶವನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ನೀಡಲಿದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಗೌರವ ನೀಡುವ ಸಲುವಾಗಿ ವಿದ್ವತ್ ಕೆಲವೊಂದು ಯೋಜನೆಗಳನ್ನು ಹಮ್ಮಿಗೊಂಡಿದೆ. ಅಗ್ರ ಕ್ರಮಾಂಕದಲ್ಲಿ ಗುರುತಿಸಿರುವ ವಿದ್ಯಾರ್ಥಿಗೆ "ಲ್ಯಾಪ್ಟಾಪ್" ಮತ್ತು ಇತರ ಪ್ರತಿಭಾನ್ವಿತ 10 ವಿದ್ಯಾರ್ಥಿಗಳಿಗೆ "ಟ್ಯಾಬ್" ನ್ನು ವಿಶೇಷ ಬಹುಮಾನವಾಗಿ ನೀಡಲಿದೆ. ಹಾಗೂ ಟ್ಯಾಲೆಂಟ್ ಟೆಸ್ಟ್ ಅಥವಾ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೂ ಅವರ ಅಂಕಗಳಿಕೆಗನುಗುಣವಾಗಿ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ಒದಗಿಸಲಾಗುತ್ತದೆ ಎಂದು ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ್ ಈ. ಮಂಡಗಳಲೆ, ಪ್ರಾಂಶುಪಾಲರಾದ ಹರೀಶ್ ಕೆ.ಆರ್. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.