


ನವದೆಹಲಿ: ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಕಾಕ್‌ಪಿಟ್ ದಾಳಿಯ ವೇಳೆ ಗಾಯಗೊಂಡಿದ್ದರೂ ಪರಿಸ್ಥಿತಿಯನ್ನು ನಿಯಂತ್ರಿಸಿ ವಿಮಾನವನ್ನು ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಮ್ಯಾನ್‌ಕೈಂಡ್ ಫಾರ್ಮಾ ₹1 ಕೋಟಿ ನೀಡುವುದಾಗಿ ಘೋಷಿಸಿದೆ.
ದುಬೈಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸೆಪ್ಟೆಂಬರ್ 30ರಂದು ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್ ಸ್ಮಿತ್ ಮಚ್ಚಾರ್ ಮೇಲೆ ದಾಳಿ ನಡೆಸಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ಮಚ್ಚಾರ್ ಕಾಕ್‌ಪಿಟ್ ಬಾಗಿಲು ತೆರೆಯಲು ಸಾಧ್ಯವಾಗಿದ್ದು, ಬಳಿಕ ಸಿಬ್ಬಂದಿ ಹಾಗೂ ಪ್ರಯಾಣಿಕರು ದಾಳಿಕೋರನನ್ನು ನಿಯಂತ್ರಿಸಲು ನೆರವಾದರು. ವಿಮಾನವನ್ನು ನಂತರ ಸೌದಿ ಅರೇಬಿಯಾದ ತಬೂಕ್‌ನಲ್ಲಿ ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು.
ಮ್ಯಾನ್‌ಕೈಂಡ್ ಫಾರ್ಮಾದ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಜುನೇಜಾ ಅವರು ಸ್ಮಿತ್ ಮಚ್ಚಾರ್ ಅವರಿಗೆ ಪತ್ರ ಬರೆದು, ಸಂಕಷ್ಟದ ಸಂದರ್ಭದಲ್ಲಿ ಅವರು ತೋರಿದ ಧೈರ್ಯ, ಸಂಯಮ ಮತ್ತು ಜವಾಬ್ದಾರಿಯನ್ನು ಶ್ಲಾಘಿಸಿದ್ದಾರೆ. ಭಾರತೀಯನೊಬ್ಬ ಇಂತಹ ಪರಿಸ್ಥಿತಿಯಲ್ಲಿ ತೋರಿದ ಧೈರ್ಯ ಮತ್ತು ಮಾನವೀಯತೆಯನ್ನು ಕಂಡು ಹೆಮ್ಮೆ ಎನಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸ್ಮಿತ್ ಮಚ್ಚಾರ್ ಮತ್ತು ಅವರ ಕುಟುಂಬಕ್ಕೆ ₹1 ಕೋಟಿ ನೀಡುವುದಾಗಿ ಘೋಷಿಸಿರುವ ಮ್ಯಾನ್‌ಕೈಂಡ್ ಫಾರ್ಮಾ, ರಕ್ಷಿಸಲ್ಪಟ್ಟ ಜೀವಗಳ ಮೌಲ್ಯಕ್ಕೆ ಯಾವುದೇ ಹಣ ಸಮನಾಗುವುದಿಲ್ಲ. ಈ ಕೊಡುಗೆ ತಮ್ಮ ಗೌರವ, ಕೃತಜ್ಞತೆ ಮತ್ತು ಮೆಚ್ಚುಗೆಯ ಸಂಕೇತ ಮಾತ್ರ ಎಂದು ತಿಳಿಸಿದೆ.
ಘಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆಸ್ಪತ್ರೆಯಿಂದ ವೀಡಿಯೊ ಕರೆ ಮೂಲಕ ಮಾತನಾಡಿದ್ದ ಸ್ಮಿತ್ ಮಚ್ಚಾರ್, ಕಾಕ್‌ಪಿಟ್‌ನಲ್ಲಿ ನಡೆದ ದಾಳಿ ಹಾಗೂ ವಿಮಾನವನ್ನು ನಿಯಂತ್ರಣಕ್ಕೆ ತರಲು ಕೈಗೊಂಡ ಕ್ರಮಗಳ ಬಗ್ಗೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.