logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹16 ಸಾವಿರ ಕೋಟಿ: ನ.20ರಂದು ಎರಡು ಯೋಜನೆಗಳಿಗೆ ಚಾಲನೆ

ಟ್ರೆಂಡಿಂಗ್
share whatsappshare facebookshare telegram
18 Nov 2026
post image

ಬೆಂಗಳೂರು:** ರಾಜ್ಯದ ಗ್ರಾಮೀಣ ರಸ್ತೆ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 16 ಸಾವಿರ ಕೋಟಿ ರೂ. ವೆಚ್ಚದ ಎರಡು ಮಹತ್ವದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 20ರಂದು ಚಾಲನೆ ನೀಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 6 ಸಾವಿರ ಕೋಟಿ ರೂ. ವೆಚ್ಚದಲ್ಲಿ ಗ್ರಾಮಗಳ ಆಂತರಿಕ ರಸ್ತೆಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವಿವರಿಸಿದರು.

ಅಸ್ತಿತ್ವದಲ್ಲಿರುವ ಹಾಗೂ ಹದಗೆಟ್ಟಿರುವ ಡಾಂಬರು ರಸ್ತೆಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲು 7 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಪ್ರಮುಖ ಗ್ರಾಮೀಣ ರಸ್ತೆಗಳಿಗೆ ಮತ್ತೊಂದು ಪದರ ಡಾಂಬರು ಹಾಕಲು 3 ಸಾವಿರ ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಅಭಿವೃದ್ಧಿಪಡಿಸುವ ರಸ್ತೆಗಳನ್ನು ಮೂರು ವರ್ಷಗಳ ಕಾಲ ಗುತ್ತಿಗೆದಾರರು ವಾರ್ಷಿಕ ನಿರ್ವಹಣೆ ಮಾಡಬೇಕಾಗುತ್ತದೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಾಪಾಡುವ ಉದ್ದೇಶದಿಂದ ಪ್ರತಿಯೊಂದು ಕಾಮಗಾರಿ ಆರಂಭಿಸುವಾಗ ಹಾಗೂ ಪೂರ್ಣಗೊಂಡ ನಂತರ ಜಿಪಿಎಸ್ ಆಧಾರಿತ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಕಡ್ಡಾಯಗೊಳಿಸಲಾಗಿದೆ.

ಈ ನಿಯಮ ಪಾಲಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.