ಉಡುಪಿ: ಗ್ರಾಮಾಂತರ ಕೈಗಾರಿಕೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲ ಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ / ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಠ 8000 ರೂ. ಮೊತ್ತದ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಹರು ವೆಬ್‌ಸೈಟ್ udupi.nic.in ಲಿಂಕ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ದೃಢೀಕರಣಗೊಂದಿಗೆ ಸೆಪ್ಟಂಬರ್ 15 ರ ಒಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ಬಿ ಬ್ಲಾಕ್, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ:0820-2574915 ಅನ್ನು ಸಂಪಕಿರ್ಸಬಹುದಾಗಿದೆ ಎಂದು ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.