


ಕಾರ್ಕಳ: ತಾಲೂಕು ಆಡಳಿತದ ವತಿಯಿಂದ ತಾಲೂಕು ಕಚೇರಿಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಮಂಜುಳಾ ಕೆ. ನಾಯ್ಕ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಭಕ್ತಿ, ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಸಾರಿದ್ದಾರೆ. ಅವರ ಆದರ್ಶ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.
ಉಪತಹಶೀಲ್ದಾರರಾದ ಮಂಜುನಾಥ್ ನಾಯಕ್, ಮಹೇಶ್ ಎಂ., ನಳಿನಿ ರೈ, ಉಪನೋಂದಣಾಧಿಕಾರಿ ಕಚೇರಿಯ ಸಿಬ್ಬಂದಿ, ಅಬಕಾರಿ ಇಲಾಖೆ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.