ಮಂಗಳೂರು: ನಗರದ ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿಯೊಬ್ಬರು ಸೋಮವಾರ ಆತ್ಮಹತ್ಯೆಮಾಡಿಕೊಂಡಿದ್ದಾರೆ.
ಮೃತರು ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28). ರಂಜಿತಾ ಅವರಿಗೆ ಅವಧಿ ಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ನಡೆದಿತ್ತು. ಎನ್ ಐಸಿಯುವಿನಲ್ಲಿ ಅರೈಕೆಯಲ್ಲಿದ್ದ ಶಿಶು ನ.3ರಂದು ಮೃತಪಟ್ಟಿತ್ತು. ರಂಜಿತಾ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಘಟನೆ ನಡೆದಿದೆ.
ರಂಜಿತಾ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯಲು ಮನೆಯವರು ಕೂಡ ಲೇಡಿಗೋಷನ್ ಆಸ್ಪತ್ರೆಗೆ ಬಂದಿದ್ದರು. ಆದರೆ ರಂಜಿತಾ ಏಕಾಏಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
ರಂಜಿತಾ ಅವರನ್ನು ಹೆರಿಗೆಗಾಗಿ ಮೊದಲು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೆಲವು ಗಂಭೀರ ಆರೋಗ್ಯ ಸಮಸ್ಯೆ ಇದ್ದುದರಿಂದ ಇಲ್ಲಿನ ಲೇಡಿಗೋಷನ್ ಆಸ್ಪತ್ರೆಗೆ ಅ.28ರಂದು ದಾಖಲು ಮಾಡಲಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.