logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಮೀನುಗಾರಿಕಾ ಬಂದರಿಗೆ ಸಿಎಂ ದಿಢೀರ್ ಭೇಟಿ: ವ್ಯಾಪಾರ ಸ್ಥಗಿತಕ್ಕೆ ಅಧಿಕಾರಿಗಳ ವಿರುದ್ಧ ಅಸಮಾಧಾನ

ಟ್ರೆಂಡಿಂಗ್
share whatsappshare facebookshare telegram
19 Sept 2026
post image

ಮಂಗಳೂರು: ಶುಕ್ರವಾರ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರೊಂದಿಗೆ ಬಂದರಿಗೆ ಆಗಮಿಸಿದ ಮುಖ್ಯಮಂತ್ರಿ, ಧಕ್ಕೆ ಪ್ರದೇಶದಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿ ಮೀನುಗಾರಿಕಾ ಬೋಟ್‌ಗಳು, ಮೀನು ಇಳಿಸುವಿಕೆ ಹಾಗೂ ಮಾರುಕಟ್ಟೆ ಚಟುವಟಿಕೆಗಳನ್ನು ಪರಿಶೀಲಿಸಿದರು. ಮೀನುಗಾರರು, ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳನ್ನು ಮುಂದಿಟ್ಟು ಬಂದರಿನ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಲಾಗಿತ್ತು. ಈ ವಿಚಾರವನ್ನು ಮೀನುಗಾರರು ಹಾಗೂ ವ್ಯಾಪಾರಿಗಳು ಸಿಎಂ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಡಿ.ಕೆ. ಶಿವಕುಮಾರ್, ಮೀನುಗಾರರ ದೈನಂದಿನ ಬದುಕಿಗೆ ತೊಂದರೆಯಾಗುವ ರೀತಿಯಲ್ಲಿ ಬಂದರಿನ ಚಟುವಟಿಕೆಗಳನ್ನು ಸ್ಥಗಿತಗೊಳಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಲು ಕಾರಣರಾದವರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಸೂಚಿಸಿರುವುದಾಗಿ ಸಿಎಂ ತಿಳಿಸಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮೀನುಗಾರರು ಬಂದರಿನ ಮೂಲಸೌಕರ್ಯ, ಧಕ್ಕೆ ಪ್ರದೇಶದ ಸೌಲಭ್ಯಗಳು ಹಾಗೂ ವ್ಯಾಪಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಮೀನುಗಾರಿಕಾ ಚಟುವಟಿಕೆಗಳಿಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಸಿಎಂ ಸ್ಥಳದಲ್ಲೇ ಮಾಹಿತಿ ಪಡೆದರು.

ಮೀನುಗಾರಿಕಾ ಕ್ಷೇತ್ರದ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಂಡು ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಬಂದರಿಗೆ ಭೇಟಿ ನೀಡಿರುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದರು.

ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲೂ ಕರಾವಳಿಯ ಮೀನುಗಾರಿಕೆ, ಬಂದರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳ ಮೀನುಗಾರಿಕಾ ಬಂದರು ಭೇಟಿ ಮಹತ್ವ ಪಡೆದಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.