ಉಡುಪಿ: ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ಹಾಸ್ಟೆಲ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಮಣಿಪಾಲದಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ.
ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವ್ಯಕ್ತಿ ಓರ್ವ ಕಿಟಕಿ ಬಳಿ ಮಲಗಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಕೂಡಲೇ ವಿದ್ಯಾರ್ಥಿನಿ ಕಿರುಚಾಡಿದ್ದು, ಈ ವೇಳೆ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಓರ್ವ ಓಡಾಟ ನಡೆಸುತ್ತಿರುವುದು ಕಂಡುಬಂದಿದೆ.
ಹಾಸ್ಟೆಲ್‌ನಲ್ಲಿ 90ಕ್ಕೂ ಅಧಿಕ ಮಂದಿ ವಿದ್ಯಾರ್ಥಿನಿಯರಿದ್ದು, 3ರಿಂದ 4 ಮಂದಿ ಭದ್ರತ ಸಿಬಂದಿಗಳಿದ್ದಾರೆ. ಅವರ ಕಣ್ತಪ್ಪಿಸಿ ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.