logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಟ್ರಂಪ್ ಹತ್ಯೆಗೆ ಸಂಚು: ಪಾಕಿಸ್ತಾನ ಮೂಲದ ವ್ಯಕ್ತಿಗೆ 27 ವರ್ಷ ಜೈಲು ಶಿಕ್ಷೆ

ಟ್ರೆಂಡಿಂಗ್
share whatsappshare facebookshare telegram
18 Nov 2026
post image

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಹತ್ಯೆಗೆ ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಪರಾಧಿಗೆ ನ್ಯೂಯಾರ್ಕ್ ನ್ಯಾಯಾಲಯ 27 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು 48 ವರ್ಷದ ಆಸಿಫ್ ಮರ್ಚೆಂಟ್ (Asif Merchant) ಎಂದು ಗುರುತಿಸಲಾಗಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸೂಚನೆಯ ಮೇರೆಗೆ ಟ್ರಂಪ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಈತನ ಮೇಲಿತ್ತು. ಮಾಜಿ ಅಧ್ಯಕ್ಷ ಜೋ ಬೈಡನ್ ಮತ್ತು ನಿಕ್ಕಿ ಹ್ಯಾಲಿ ಅವರ ಹತ್ಯೆಗೂ ಸಂಚು ರೂಪಿಸಿದ್ದ ಎಂಬ ಆರೋಪವೂ ಈತನ ವಿರುದ್ಧ ಕೇಳಿಬಂದಿತ್ತು.

2020ರಲ್ಲಿ ಇರಾನ್‌ನ ಸೇನಾ ಕಮಾಂಡರ್ ಖಾಸಿಂ ಸುಲೈಮಾನಿ ಹತ್ಯೆಗೆ ಪ್ರತೀಕಾರವಾಗಿ ಟ್ರಂಪ್ ಅವರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು. ಇದಕ್ಕಾಗಿ ಅಮೆರಿಕದಲ್ಲಿ ಜನರನ್ನು ನೇಮಿಸಿಕೊಳ್ಳಲು ಮರ್ಚೆಂಟ್ ಪ್ರಯತ್ನಿಸಿದ್ದ. ಸುಪಾರಿ ಹಂತಕರನ್ನು ಹುಡುಕುವ ಸಂದರ್ಭದಲ್ಲಿ ಅರಿವಿಲ್ಲದೆ ಎಫ್‌ಬಿಐ (FBI) ಅಧಿಕಾರಿಗಳನ್ನೇ ಸಂಪರ್ಕಿಸಿದ್ದ. ಬಳಿಕ ಆತನ ಸಂಚನ್ನು ಅಧಿಕಾರಿಗಳು ವಿಫಲಗೊಳಿಸಿದ್ದರು.

2024ರ ಜುಲೈನಲ್ಲಿ ಮರ್ಚೆಂಟ್‌ನನ್ನು ಬಂಧಿಸಲಾಗಿತ್ತು. 2026ರ ಮಾರ್ಚ್‌ನಲ್ಲಿ ನ್ಯಾಯಾಲಯ ಆತನನ್ನು ಅಪರಾಧಿ ಎಂದು ಘೋಷಿಸಿತ್ತು. ಇದೀಗ 27 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆದರೆ, ಅಮೆರಿಕದ ನಾಯಕರ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಇರಾನ್ ಸರ್ಕಾರ ನಿರಾಕರಿಸಿತ್ತು.

ಆಸಿಫ್ ಮರ್ಚೆಂಟ್ ಪಾಕಿಸ್ತಾನದ ಬ್ಯಾಂಕುಗಳಲ್ಲಿ ಕೆಲಸ ಮಾಡಿದ್ದ ಎನ್ನಲಾಗಿದೆ. ಪಾಕಿಸ್ತಾನ ಮತ್ತು ಇರಾನ್ ಎರಡೂ ದೇಶಗಳಲ್ಲಿ ಕುಟುಂಬ ಹೊಂದಿದ್ದ ಈತ, ವ್ಯವಹಾರದ ನಿಮಿತ್ತ ಆಗಾಗ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದ. ಕೆಲವು ವರ್ಷಗಳ ಹಿಂದೆ ಇರಾನ್‌ನ IRGC ಗುಪ್ತಚರ ಅಧಿಕಾರಿಗಳು ಆತನ ಸಂಪರ್ಕಕ್ಕೆ ಬಂದಿದ್ದರು. ಬಳಿಕ ಆತನಿಗೆ ತರಬೇತಿ ನೀಡಿ ಹತ್ಯೆಯ ಸಂಚಿನಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.