logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಪ್ರದೀಪ್ ಪೂಜಾರಿ ಹಲ್ಲೆ ಪ್ರಕರಣ: ಕರ್ತವ್ಯ ಲೋಪದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿ ಅಮಾನತು

ಟ್ರೆಂಡಿಂಗ್
share whatsappshare facebookshare telegram
6 Nov 2026
post image

ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವಿಚಾರಣಾ ವರದಿಯ ಆಧಾರದ ಮೇಲೆ ವರದಿಯನ್ನು ಪಶ್ಚಿಮ ವಲಯದ ಡಿಐಜಿಗೆ ರವಾನಿಸಲಾಗಿದೆ. ಇದರಂತೆ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ನಿಯೋಜಿಸಲಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇನ್ನು ಆಸ್ಪತ್ರೆಯಲ್ಲಿ ಕಾವಲು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಲ್ಲಿಸಿದ ವಿಚಾರಣಾ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಅಮಾನತುಗೊಂಡ ಸಿಬ್ಬಂದಿಯ ವಿರುದ್ಧವೂ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್‌ಪಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.