


ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದ ಕುರಿತು ರೀಲ್ಸ್ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ದಸರಾ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ ಹಂಚಿಕೊಳ್ಳುವಂತೆ ಯುವಕ-ಯುವತಿಯರಿಗೆ ಅವರು ಕರೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಆರಂಭದಿಂದ ಅಂತ್ಯದವರೆಗೆ ಜನರಿಗೆ ಇಷ್ಟವಾಗುವ ಕಾರ್ಯಕ್ರಮಗಳು, ದೀಪಾಲಂಕಾರ, ಜಂಬೂಸವಾರಿ, ಆಹಾರ ಮೇಳ ಸೇರಿದಂತೆ ವಿವಿಧ ವಿಷಯಗಳ ಕುರಿತು ರೀಲ್ಸ್ ಮಾಡಬಹುದು. ‘ಮೈಸೂರು ದಸರಾ-2026’ ಎಂದು ಟ್ಯಾಗ್ ಮಾಡಲಾದ ರೀಲ್ಸ್‌ಗಳಲ್ಲಿ ಅತ್ಯುತ್ತಮ 100 ರೀಲ್ಸ್‌ಗಳನ್ನು ಆಯ್ಕೆ ಮಾಡಿ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
“ಈಗಾಗಲೇ ನಾನೂ ರೀಲ್ಸ್ ಮಾಡಿದ್ದೇನೆ. ನೀವೂ ಉತ್ತಮವಾಗಿ ರೀಲ್ಸ್ ಮಾಡಿ” ಎಂದು ಮುಖ್ಯಮಂತ್ರಿ ಯುವಜನರಿಗೆ ಪ್ರೋತ್ಸಾಹ ನೀಡಿದರು.
ಮೈಸೂರಿನ ದಸರಾ ದೀಪಾಲಂಕಾರವನ್ನು ಇನ್ನೂ 10 ದಿನಗಳ ಕಾಲ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೀಪಾಲಂಕಾರವನ್ನು ವೀಕ್ಷಿಸಿದ್ದು, ಪ್ರತಿದಿನ ಲಕ್ಷಾಂತರ ಜನರು ಈ ಅದ್ಭುತ ಬೆಳಕಿನ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ದೀಪಾಲಂಕಾರದ ಅವಧಿಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.