ಬೆಂಗಳೂರು, ಆ.29: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ಬೆಳಗಿನ ಜಾವ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿನತ್ತ ಕರೆದೊಯ್ಯಲಾಯಿತು.
ಪೊಲೀಸ್ ವಾಹನದಲ್ಲಿ ಬಿಗಿ ಭದ್ರತೆಯೊಂದಿಗೆ ದರ್ಶನ್ ಅವರನ್ನು ಕರೆದೊಯ್ಯಲಾಯಿತು. ಮಾರ್ಗದ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸ್ ಭದ್ರತೆಯನ್ನು ಕೂಡ ನಿಯೋಹಜಿಸಲಾಗಿತ್ತು. ಆರೋಪಿ ಖ್ಯಾತ ನಟನಾಗಿದ್ದ ಹಿನ್ನಲೆ ಮಾರ್ಗದ ಮಧ್ಯೆ ಅಭಿಮಾನಿಗಳು ದೌಡಯಿಸುವ ಸಾಧ್ಯತೆ ಇದೆ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕಮಾರ್ಗವಾಗಿ ಬಳ್ಳಾರಿಯತ್ತ ದರ್ಶನ್ ಅವರನ್ನು ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು. ಉಳಿದ ವಿಚಾರಣಾಧೀನ ಕೈ ದಿಗಳನ್ನು ಮೈಸೂರು, ಶಿವಮೊಗ್ಗ, ಧಾರವಾಡ, ವಿಜಯಪುರ, ಕಲಬುರಗಿ, ಬೆಳಗಾವಿ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.