logo
AADYA ELECTRONICS.jpg
SHARADA TECHERS.jpeg
hindalco everlast.jpeg

ವೈಕ್ರೋಫೈನಾನ್ಸ್ ಹಾವಳಿಗೆ ಕೊನೆಗೂ ಸರಕಾರದಿಂದ ಬಿತ್ತು ಬ್ರೇಕ್: ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ

ಟ್ರೆಂಡಿಂಗ್
share whatsappshare facebookshare telegram
30 Jan 2025
post image

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸದಾಗಿ ಜಾರಿಗೆ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ಅವರು, ಫೈನಾನ್ಸ್​​​ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.

ಅಮಾನವೀಯವಾಗಿ ಮೈಕ್ರೋ ಪೈನಾನ್ಸ್​ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿದ್ದೇವೆ. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸಂಜೆ 4 ಗಂಟೆಗೆ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ ಎಂದು ತಿಳಿಸಿದರು.

WhatsApp Image 2025-01-13 at 14.53.16 (1).jpeg
25x12.jpg
WhatsApp Image 2024-12-03 at 11.27.39 PM.jpeg
WhatsApp Image 2024-12-03 at 11.27.40 PM.jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
sharada.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.