


ಬೆಂಗಳೂರು:** ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಪಕ್ಷದ ಸಂಸದೀಯ ಮಂಡಳಿ ಸದಸ್ಯೆ ಡಾ. ಸುಧಾ ಯಾದವ್ ಅವರು ನಾಳೆ (ಅ.16) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಇತ್ತೀಚೆಗಷ್ಟೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಈ ಬದಲಾವಣೆಯಲ್ಲಿ ನಾಲ್ವರಿಗೆ ಹೊಸದಾಗಿ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದ್ದು, ಇಬ್ಬರು ಹಾಲಿ ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಲಾಗಿದೆ.
ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮಿಳುನಾಡಿನ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದೆ.
ಇನ್ನು ಒಡಿಶಾದ ನೂತನ ರಾಜ್ಯಪಾಲರಾಗಿ ಬ್ರಜ್ ಮೋಹನ್ ರಾಮ್, ಉತ್ತರಾಖಂಡದ ರಾಜ್ಯಪಾಲರಾಗಿ ಡಾ. ಧಾಲ್ ಸಿಂಗ್ ಬಿಸೆನ್ ಹಾಗೂ ಸಿಕ್ಕಿಂನ ರಾಜ್ಯಪಾಲರಾಗಿ ದುಷ್ಯಂತ್ ಗೌತಮ್ ಅವರನ್ನು ನೇಮಕ ಮಾಡಲಾಗಿ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.