logo
WhatsApp Image 2026-04-02 at 14.46.04.jpeg
hindalco everlast.jpeg

ನೀಟ್ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳುಂತಿಲ್ಲ;ಸುಪ್ರೀಂ ಕೋರ್ಟ್ ಎಚ್ಚರಿಕೆ

ಟ್ರೆಂಡಿಂಗ್
share whatsappshare facebookshare telegram
28 Jul 2026
post image

ಹೊಸದಿಲ್ಲಿ : ದಿಲ್ಲಿಯ ಜಂತರ್ ಮಂತರ್ ಮತ್ತು ವಿವಿಧ ರಾಜ್ಯಗಳಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದ ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ಕಲ್ಯ ಬಾಗ್ನಿ ಮತ್ತು ವಿ ಮೋಹನ ಅವರ ಪೀಠವು, ವಿವಿಧ ರಾಜ್ಯಗಳಾದ್ಯಂತ ಪೊಲೀಸರು ಬಂಧಿಸಿರುವ ಅಪ್ರಾಪ್ತ ವಯಸ್ಕರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ. ವಿದ್ಯಾರ್ಥಿಗಳ ಪ್ರತಿಭಟನೆಯ ಹಿಂಸಾಚಾರದ ಬಗ್ಗೆ ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲದ ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲು ನಿರ್ದೇಶಿಸಿದೆ. ಪ್ರತಿಭಟನಾ ನಿರತ ನೀಟ್ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ದೌರ್ಜನ್ಯದ ಆರೋಪಗಳ ಬಗ್ಗೆ ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ಅಗತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತಿರೇಕದ ಕೃತ್ಯ ಎಸಗಿದ ಯಾರೇ ಆಗಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ನಿರ್ದಿಷ್ಟ ನಿಯಮಗಳ ಉಲ್ಲಂಘನೆಯಾದರೆ, ಅದನ್ನು ಕಾನೂನು ರೀತಿಯಲ್ಲಿ ನಿಭಾಯಿಸಬೇಕು ಎಂದು ಕೋರ್ಟ್ ಹೇಳಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.