

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದೆ. ತನ್ನ ಜನಪ್ರಿಯ 'ನಂದಿನಿ' ಬ್ರ್ಯಾಂಡ್‌ನ ಬೆಣ್ಣೆ ಮತ್ತು ತುಪ್ಪದ ದರವನ್ನು ದಿಢೀರ್ ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ನಾಳೆಯಿಂದಲೇ ಜಾರಿಗೆ ಬರಲಿವೆ. ತುಪ್ಪದ ದರವನ್ನು ಪ್ರತಿ ಕೆಜಿಗೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹಾಗೆಯೇ ಬೆಣ್ಣೆಯ ಬೆಲೆಯನ್ನು ಪ್ರತಿ ಕೆಜಿಗೆ 22 ರೂ. ಏರಿಕೆ ಮಾಡಲಾಗಿದೆ. ಈ ನೂತನ ದರಗಳು ಜುಲೈ 24 ರಿಂದ (ಶುಕ್ರವಾರ) ಅಧಿಕೃತವಾಗಿ ಜಾರಿಗೆ ಬರಲಿವೆ. ರಾಜ್ಯಾದ್ಯಂತ ಇರುವ ಎಲ್ಲಾ ಕೆಎಂಎಫ್ ಮಳಿಗೆಗಳಲ್ಲಿ ಈ ಹೊಸ ದರಗಳು ಅನ್ವಯವಾಗಲಿವೆ ಎಂದು ತಿಳಿದುಬಂದಿದೆ. ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯು ಕೇವಲ ಗೃಹ ಬಳಕೆದಾರರಿಗೆ ಮಾತ್ರವಲ್ಲದೆ, ಹೋಟೆಲ್ ಮತ್ತು ಬೇಕರಿ ಉದ್ಯಮದ ಮೇಲೂ ದೊಡ್ಡ ಪರಿಣಾಮ ಬೀರಲಿದೆ. ತುಪ್ಪ ಮತ್ತು ಬೆಣ್ಣೆಯನ್ನು ಹೆಚ್ಚಾಗಿ ಬಳಸುವ ಸಿಹಿ ತಿಂಡಿ ತಯಾರಕರು ಹಾಗೂ ಹೋಟೆಲ್ ಮಾಲೀಕರು ಈ ದರ ಏರಿಕೆಯಿಂದ ಕಂಗೆಟ್ಟಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.